HomeKarnatakaಪ್ರಜ್ವಲ್ ರೇವಣ್ಣ ಕರೆತರಲು ಕೇಂದ್ರದ ನೆರವು ಬೇಕು; ಗೃಹ ಸಚಿವ ಪರಮೇಶ್ವರ್ ಹೇಳಿಕೆ

ಪ್ರಜ್ವಲ್ ರೇವಣ್ಣ ಕರೆತರಲು ಕೇಂದ್ರದ ನೆರವು ಬೇಕು; ಗೃಹ ಸಚಿವ ಪರಮೇಶ್ವರ್ ಹೇಳಿಕೆ

ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ವಿಚಾರಣೆಗೆ ಅವರನ್ನು ಕರೆ ತರಲು ಕೇಂದ್ರದ ನೆರವು ಬೇಕು. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಯಾವ ರೀತಿ ಅವರನ್ನು ಕರೆತರಬಹುದು ಎಂಬುದನ್ನು ಪರಿಶೀಲಿಸಲಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ನೋಟಿಸ್ ನೀಡಿದೆ. ಒಂದು ವೇಳೆ ಅವರು ವಿಚಾರಣೆಗೆ ಬಾರದಿದ್ದರೆ ಯಾವ ಕ್ರಮ ಕೈಗೊಳ್ಳಬೇಕೆಂಬುದನ್ನು ತನಿಖಾ ತಂಡ ನಿರ್ಧರಿಸುತ್ತದೆ ಎಂದರು.

ಇನ್ನು ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಿದೆ. ಅಲ್ಲದೆ ಸಂತ್ರಸ್ತೆಯರಿಂದ ಮಾಹಿತಿ ಪಡೆದುಕೊಳ್ಳಲು ಮಹಿಳಾ ಅಧಿಕಾರಿಯನ್ನು ನಿಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular