BIG NEWS: ರಾಜ್ಯಕ್ಕೆ ಆಗಮಿಸಿದ ಕೇಂದ್ರ ಬರ ಅಧ್ಯಯನ ತಂಡ; ಭೀಕರ ಬರಗಾಲ, ಅನ್ನದಾತನ ಸಂಕಷ್ಟದ ಸ್ಥಿತಿ ವಿವರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರದ ಅಧಿಕಾರಿಗಳ ಮೂರು ತಂಡ ಭೇಟಿ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ರಾಜ್ಯದ ರೈತರ ರಕ್ಷಣೆಗೆ ನೆರವಾಗುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

ರಾಜ್ಯದಲ್ಲಿ ಉಂಟಾಗಿರುವ ಬರಗಾಲ, ಕೃಷಿಗೆ ಎದುರಾಗಿರುವ ಸಂಕಷ್ಟ, ನೀರಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಮನದಟ್ಟಾಗುವಂತೆ ವಿವರಿಸಿದರು. ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಕೆಲವೆಡೆ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಸ್ಥಿತಿಯಿದೆ ಎಂದು ವಾಸ್ತವ ಪರಿಸ್ಥಿತಿಯನ್ನು ಸಿಎಂ ವಿವರಿಸಿದರು.

ಮಳೆ ಕೊರತೆಯಿದಿಂದಾಗಿ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿದೆ. ಇದರಿಂದ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನು ಸೃಷ್ಟಿಸಿದೆ ಎಂದು ವಿವರಿಸಿದರು.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಇಲ್ಲದೇ ಆತಂಕದ ಸ್ಥಿತಿ ಎದುರಾಗಿದೆ. ಕೇಂದ್ರ ಅಧಿಕಾರಿಗಳು ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read