HomeAutoಹೊಸ ಎಲೆಕ್ಟ್ರಿಕ್ ವಾಹನ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ

ಹೊಸ ಎಲೆಕ್ಟ್ರಿಕ್ ವಾಹನ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ದೇಶವನ್ನು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯ ಕೇಂದ್ರ ಸ್ಥಾನವನ್ನಾಗಿ ಮಾಡುವ ಉದ್ದೇಶ ಹೊಂದಿರುವ ಹೊಸ ಇ- ವೆಹಿಕಲ್ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಕನಿಷ್ಠ 4150 ಕೋಟಿ ರೂ.ಡಿಕೆ ಮಾಡುವ ಕಂಪನಿಗಳಿಗೆ ಸೀಮಾ ಸುಂಕದಲ್ಲಿ ವಿನಾಯಿತಿ ಸೇರಿ ಹಲವು ಆಫರ್ ನೀಡಲಾಗಿದೆ. ವಿದೇಶಗಳಿಂದ ಕಡಿತ ಮಾಡಿದ ಸೀಮಾ ಸುಂಕದ ದರದಲ್ಲಿ ಸೀಮಿತ ಪ್ರಮಾಣದಲ್ಲಿ ವಾಹನಗಳ ಆಮದಿಗೆ ಅವಕಾಶ ಕಲ್ಪಿಸಲಾಗುತ್ತದೆ.

ಉತ್ಪಾದನಾ ಘಟಕ ನಿರ್ಮಾಣ ಆರಂಭದ ಮೂರು ವರ್ಷದೊಳಗೆ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬೇಕಿದ್ದು, 5 ವರ್ಷದವರೆಗೆ ಶೇಕಡ 50ರಷ್ಟು ವಾಹನಗಳನ್ನು ಸ್ಥಳೀಯವಾಗಿಯೇ ಮಾರಾಟ ಮಾಡಬೇಕು. 30 ಲಕ್ಷ ರೂ. ಗಿಂತ ಹೆಚ್ಚಿನ ಬೆಲೆಯ ಇ- ವಾಹನ ಗಳನ್ನು ಶೇಕಡ 15ರಷ್ಟು ಸೀಮಾ ಸುಂಕದಡಿ ಆಮದು ಮಾಡಿಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಲಿ ಇಂತಹ ವಾಹನಗಳಿಗೆ ಸೀಮಾ ಸುಂಕ ಶೇಕಡ 70 ರಿಂದ ಶೇಕಡ 100ರವರೆಗೂ ಇದೆ. 5 ವರ್ಷದವರೆಗೆ ವಿನಾಯಿತಿ ನೀಡಲಾಗುವುದು. ವಾರ್ಷಿಕ ಗರಿಷ್ಠ 8000 ವಾಹನ ಮಾತ್ರ ವಿದೇಶಗಳಿಂದ ಆಮದು ಮಾಡಿಕೊಳ್ಳಬಹುದಾಗಿದೆ. 2030ರ ವೇಳೆಗೆ ವಾರ್ಷಿಕವಾಗಿ ಒಂದು ಕೋಟಿ ಈ ವಾಹನಗಳನ್ನು ಮಾರಾಟ, ಉದ್ಯಮದಲ್ಲಿ 5 ಕೋಟಿ ಉದ್ಯೋಗ ಸೃಷ್ಟಿ ಗುರಿ ಹೊಂದಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular