HomeLatest NewsBIG NEWS : 'ಮಹಿಳಾ ಮೀಸಲಾತಿ' ಮಸೂದೆಗೆ ಕೇಂದ್ರ ಅಸ್ತು ; ಸಂಸತ್ತು, ಅಸೆಂಬ್ಲಿಯಲ್ಲಿ ಶೇ....

BIG NEWS : ‘ಮಹಿಳಾ ಮೀಸಲಾತಿ’ ಮಸೂದೆಗೆ ಕೇಂದ್ರ ಅಸ್ತು ; ಸಂಸತ್ತು, ಅಸೆಂಬ್ಲಿಯಲ್ಲಿ ಶೇ. 33ರಷ್ಟು ಸ್ಥಾನ ಸ್ತ್ರೀಯರಿಗೆ ಮೀಸಲು !

ನವದೆಹಲಿ : ಕೇಂದ್ರ ಸರ್ಕಾರವು ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. 2011ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಹಸಿರು ನಿಶಾನೆ ತೋರಿದೆ.

ಏಪ್ರಿಲ್ 1 ರಿಂದ ವಿಶೇಷ ಅಧಿವೇಶನ : ಈ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಏಪ್ರಿಲ್ 16ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ನಿರ್ಧರಿಸಿದೆ.

ಪ್ರಸ್ತುತ ನಡೆಯುತ್ತಿರುವ ಡಿಜಿಟಲ್ ಜನಗಣತಿ ಪ್ರಕ್ರಿಯೆ ವಿಳಂಬವಾಗಿರುವ ಕಾರಣ, ಮೀಸಲಾತಿಯನ್ನು ಜಾರಿಗೆ ತರಲು ವಿಳಂಬ ಮಾಡಬಾರದೆಂಬ ಉದ್ದೇಶದಿಂದ 2011ರ ಜನಗಣತಿಯ ಅಂಕಿ-ಅಂಶಗಳನ್ನೇ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.ಸಂಸತ್ತಿನಲ್ಲಿ ಈ ಮಸೂದೆಗೆ ಅಂಗೀಕಾರ ದೊರೆತ ನಂತರ, 2029ರ ಲೋಕಸಭೆ ಚುನಾವಣೆಯ ವೇಳೆಗೆ ಮೀಸಲಾತಿಯು ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ.: ಮಹಿಳಾ ಮೀಸಲಾತಿ ಜಾರಿಯಾದ ಬೆನ್ನಲ್ಲೇ ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು 543 ರಿಂದ 816 ಕ್ಕೆ ಹೆಚ್ಚಿಸುವ ಪ್ರಸ್ತಾವನೆಯೂ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

273 ಮಹಿಳಾ ಸಂಸದರು : ಒಟ್ಟು 816 ಸ್ಥಾನಗಳ ಪೈಕಿ ಶೇ. 33ರಷ್ಟು ಅಂದರೆ ಸುಮಾರು 273 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಲಿವೆ.

ನಾರಿ ಶಕ್ತಿ ವಂದನ ಕಾಯಿದೆಗೆ ತಿದ್ದುಪಡಿ: ಈ ಹಿಂದೆ ಹೊಸ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ (Delimitation) ಪ್ರಕ್ರಿಯೆಯ ನಂತರವಷ್ಟೇ ಮೀಸಲಾತಿ ನೀಡುವ ಯೋಜನೆಯಿತ್ತು. ಆದರೆ, ಪ್ರಕ್ರಿಯೆಯನ್ನು ತ್ವರಿತಗೊಳಿಸಲು ‘ನಾರಿ ಶಕ್ತಿ ವಂದನ ಕಾಯಿದೆ’ಗೆ ತಿದ್ದುಪಡಿ ತರುವ ಮೂಲಕ ಸರ್ಕಾರ ಈ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಇದರಿಂದಾಗಿ 2029ರ ವೇಳೆಗೆ ದೇಶದ ಶಾಸನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಗಣನೀಯವಾಗಿ ಹೆಚ್ಚಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular