ನವದೆಹಲಿ: ಮುಂಗಾರು ಅವಧಿಯಲ್ಲಿ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಸಗೊಬ್ಬರಕ್ಕೆ ಸಬ್ಸಿಡಿ ಮುಂದುವರೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಫಾಸ್ಫೆಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಕ್ಕೆ 37,216 ಕೋಟಿ ರೂ. ಅನುದಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಕೇಂದ್ರ ಸಂವಹನ ಸಚಿವ ಅಶ್ವಿನಿ ವೈಷ್ಣವ್ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಏಪ್ರಿಲ್ 1ರಿಂದ ಸೆಪ್ಟಂಬರ್ 30ರವರೆಗೆ ರಸಗೊಬ್ಬರದ ಸಹಾಯಧನ ವಿಸ್ತರಣೆಗೆ ಅನುಮೋದನೆ ನೀಡಲಾಗಿದೆ. ಇದರಿಂದ ರೈತರಿಗೆ ಕೈಗೆಟುಕುವ ದರದಲ್ಲಿ ರಸಗೊಬ್ಬರ ದೊರೆಯಲಿದೆ. ಡಿಎಪಿ ರಸಗೊಬ್ಬರದ ದರ ಏರಿಕೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.