HomeIndiaBREAKING NEWS: ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ

BREAKING NEWS: ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊನೆಗೂ ಬರ ಪರಿಹಾರ ಘೋಷಣೆ ಮಾಡಿದೆ. ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ 18,174 ಕೋಟಿ ಬರ ಪರಿಹಾರಕ್ಕಾಗಿ ಕೇಂದ್ರದ ಮುಂದೆ ಬೇಡಿಕೆ ಇಟ್ಟಿತ್ತು. ಆದರೆ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸಿದ್ದರಿಂದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ 3,454 ಕೋಟಿ ಬರ ಪರಿಹಾರ ಘೋಷಣೆ ಮಾಡಿದೆ. ಇದೇ ವೇಳೆ ತಮಿಳುನಾಡಿಗೆ 275 ಕೋಟಿ ನೆರೆ ಪರಿಹಾರ ಘೋಷಣೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular