ಕರ್ನಾಟಕ ಹೈಕೋರ್ಟ್ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂ: ಕೇಂದ್ರ ಸರ್ಕಾರ ಅಧಿಸೂಚನೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂಗೊಳಿಸಿ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಸಿ.ಎಂ. ಪೂಣಚ್ಚ, ಅನಿಲ್ ಭೀಮಸೇನ ಕಟ್ಟಿ, ಸಿ.ಎಂ. ಜೋಶಿ, ಉಮೇಶ್ ಎಂ. ಅಡಿಗ, ಟಿ.ಜಿ. ಶಿವಶಂಕರೇಗೌಡ ಅವರನ್ನು ಅಧಿಕಾರ ವಹಿಸಿಕೊಳ್ಳುವ ದಿನದಿಂದ ಅನ್ವಯವಾಗುವಂತೆ ಕಾಯಂಗೊಳಿಸಲಾಗಿದೆ.

ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ಜಿ. ಬಸವರಾಜ ಅವರನ್ನು 2024ರ ಆಗಸ್ಟ್ 16 ರಿಂದ ಅನ್ವಯವಾಗುವಂತೆ ಮತ್ತೆ ಒಂದು ವರ್ಷ ಹೊಸದಾಗಿ ಹೆಚ್ಚುವರಿ ನ್ಯಾಯಮೂರ್ತಿ ಹುದ್ದೆಯಲ್ಲಿ ಮುಂದುವರೆಸಲಾಗಿದೆ ಎಂದು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಜಂಟಿ ಕಾರ್ಯದರ್ಶಿ ಜಗನ್ನಾಥ ಶ್ರೀನಿವಾಸನ್ ಅಧಿಸೂಚನೆ ಹೊರಡಿಸಿದ್ದಾರೆ.

ಹೈಕೋರ್ಟ್ ನಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಕಾಯಂಗೊಂಡ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಸದ್ಯ ಹೈಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳು ಸೇರಿ 51 ನ್ಯಾಯಮೂರ್ತಿಗಳಿದ್ದಾರೆ. ಅವರಲ್ಲಿ 44 ಕಾಯಂ ನ್ಯಾಯಮೂರ್ತಿಗಳು, 7 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read