HomeIndiaಕರ್ನಾಟಕ, ಗೋವಾ, ಮಹಾರಾಷ್ಟ್ರ ಜಲ ವಿವಾದದ ಮಹದಾಯಿ ಟ್ರಿಬ್ಯುನಲ್ ವಿಸ್ತರಣೆ: ಕೇಂದ್ರದಿಂದ ಅಧಿಸೂಚನೆ

ಕರ್ನಾಟಕ, ಗೋವಾ, ಮಹಾರಾಷ್ಟ್ರ ಜಲ ವಿವಾದದ ಮಹದಾಯಿ ಟ್ರಿಬ್ಯುನಲ್ ವಿಸ್ತರಣೆ: ಕೇಂದ್ರದಿಂದ ಅಧಿಸೂಚನೆ

ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ನಡುವಿನ ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸುವ ಉದ್ದೇಶದಿಂದ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅವಧಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ನಡುವಿನ ದಶಕಗಳ ಹಳೆಯ ವ್ಯಾಜ್ಯ ಪರಿಹಾರಕ್ಕೆ 2010ರ ನವೆಂಬರ್ 16ರಂದು ಅಂತಾರಾಜ್ಯ ಜಲವಿವಾದ ಕಾಯ್ದೆ 1956ರ ಅಡಿಯಲ್ಲಿ ಮಹದಾಯಿ ಜಲ ವಿವಾದ ನ್ಯಾಯಮಂಡಳಿಯನ್ನು ಸ್ಥಾಪಿಸಲಾಗಿತ್ತು.

ಮಹದಾಯಿ ನದಿ ಮತ್ತು ಅದರ ನದಿ ಕಣಿವೆ ಸಂಬಂಧ ಇರುವ ವಿವಾದಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ನ್ಯಾಯಮಂಡಳಿಯನ್ನು ಸ್ಥಾಪಿಸಲಾಗಿತ್ತು. ಅಧ್ಯಯನಕ್ಕೆ ಮತ್ತಷ್ಟು ಸಮಯ ಬೇಕೆಂದು ನ್ಯಾಯಮಂಡಳಿ ಮನವಿ ಮಾಡಿದ್ದರಿಂದ ಅವಧಿಯನ್ನು ಆರು ತಿಂಗಳು ವಿಸ್ತರಿಸಲಾಗಿದೆ ಎಂದು ಕೇಂದ್ರ ಜಲ ಶಕ್ತಿ ಸಚಿವಾಲಯ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular