HomeKarnatakaಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್. ದಿನೇಶ್ ಕುಮಾರ್ ನೇಮಕ: ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್. ದಿನೇಶ್ ಕುಮಾರ್ ನೇಮಕ: ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಪ್ರಕಟಿಸಿದೆ. 2015 ರಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ದಿನೇಶ್ ಕುಮಾರ್ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು 24 ದಿನ ಮುಖ್ಯ ನ್ಯಾಯಮೂರ್ತಿಯಾಗಿರುತ್ತಾರೆ.

ಜನವರಿ 19ರಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಪ್ರಸನ್ನ ಬಿ. ವರಾಳೆ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಲಾಗಿತ್ತು. ವರಾಳೆ ಅವರಿಗೆ ಪದೋನ್ನತಿ ನೀಡಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯನ್ನಾಗಿ ಬಡ್ತಿ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ದಿನೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಮೂರ್ತಿಯಾಗಿ ನ್ಯಾಯಾಂಗ ಮತ್ತು ಆಡಳಿತಾತ್ಮಕ ವಿಭಾಗದಲ್ಲಿ ಸಾಕಷ್ಟು ಅನುಭವ ಹೊಂದಿರುವ ದಿನೇಶ್ ಕುಮಾರ್ ಫೆಬ್ರವರಿ 24ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular