BIG NEWS: ಕೆಜಿಎಫ್ ನಲ್ಲಿ ಗಣಿಗಾರಿಕೆ ಪುನಾರಂಭಕ್ಕೆ ಗ್ರೀನ್ ಸಿಗ್ನಲ್: ಸಾವಿರಾರು ಉದ್ಯೋಗ ಸೃಷ್ಟಿ

ಬೆಂಗಳೂರು: ಕೋಲಾರ ಜಿಲ್ಲೆಯ ಕೆಜಿಎಫ್ ಪ್ರದೇಶದಲ್ಲಿ ಭಾರತ್ ಚಿನ್ನದ ಗಣಿ ಸಂಸ್ಥೆಯ ಗಣಿ ಗುತ್ತಿಗೆ ಅವಧಿ ಮುಗಿದು ನಿಷ್ಕ್ರಿಯವಾಗಿದ್ದ 13 ಟೇಲಿಂಗ್‌ ಡಂಪ್‌ ಗಳ 1003 ಎಕರೆ ಪ್ರದೇಶದಲ್ಲಿ ಗಣಿ ಗುತ್ತಿಗೆ ಚಟುವಟಿಕೆ ಮುಂದುವರೆಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಹಮತಿ ನೀಡಲಾಗಿದೆ.

5213.21 ಹೆಕ್ಟೇರ್ ಪ್ರದೇಶದಲ್ಲಿ ಈ ಚಟುವಟಿಕೆಗಳು ನಡೆಯಲಿದೆ. 2330 ಎಕರೆ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ಕೈಗಾರಿಕಾ ವಸಾಹತುವನ್ನು ಸ್ಥಾಪಿಸಲು ನೀಡಬೇಕೆನ್ನುವ ಬೇಡಿಕೆ ಇಡಲಾಗಿದ್ದು. ಇದರಿಂದ ಸಾವಿರಾರು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

https://twitter.com/KarnatakaVarthe/status/1803790118752522733

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read