ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ : ಕನ್ನಡ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರಿ ನೇಮಕಾತಿ ಪರೀಕ್ಷೆ!

ನವದೆಹಲಿ: ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ.

ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ಒಡಿಯಾ, ತೆಲುಗು, ಉರ್ದು, ತಮಿಳು, ಪಂಜಾಬಿ, ಮಣಿಪುರಿ, ಕೊಂಕಣಿ ಭಾಷೆಗಳಲ್ಲಿಯೂ ನೇಮಕಾತಿ ಪರೀಕ್ಷೆ ನಡೆಸಲಾಗುವುದು.

ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆಗಳು ಮತ್ತು ಪಿಂಚಣಿ ಸಚಿವಾಲಯಕ್ಕೆ ಸಂಬಂಧಿಸಿದ 14ನೇ ಹಿಂದಿ ಸಲಹಾ ಸಮಿತಿ ಸಭೆಯನ್ನುದ್ದೇಶಿ ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಈ ಮಾಹಿತಿ ನೀಡಿದ್ದಾರೆ.

ಕೇಂದ್ರದ ಈ ನಿರ್ಧಾರದಿಂದ ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳಿಗೆ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಸಾಧ್ಯವಿದ್ದು, ಸರ್ಕಾರಿ ನೌಕರರಿಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿಸಲಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read