ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಕನಿಷ್ಠ ಆಮದು ಬೆಲೆ ಪ್ರತಿ ಕೆಜಿಗೆ 351 ರೂ.ಗೆ ಹೆಚ್ಚಳ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ತಡೆಯಲು ಕೇಂದ್ರವು ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಕೆಜಿಗೆ 251 ರೂ.ನಿಂದ 351 ರೂ.ಗೆ ಹೆಚ್ಚಿಸಲಾಗಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಧೀನದಲ್ಲಿರುವ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ(DGFT), ವಾಣಿಜ್ಯ ಇಲಾಖೆಯು ಆಮದು ನೀತಿಗೆ ತಿದ್ದುಪಡಿ ಮಾಡುವ ಮೂಲಕ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಸುಂಕದ ಮಾರ್ಗಗಳ ಮೇಲೆ ವಿಧಿಸಲಾದ ಕನಿಷ್ಠ ಆಮದು ಬೆಲೆಯನ್ನು ಕೆಜಿಗೆ 251 ರೂ.ನಿಂದ 351 ರೂ.ಗೆ ಪರಿಷ್ಕರಿಸಲಾಗಿದೆ. ಹೆಚ್ಚಳವು ದೇಶೀಯ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಹಾಯ ಮಾಡುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಅಡಿಕೆ ಬೆಳೆಗಾರರು ದೇಶೀಯ ಬೆಳೆಗಾರರನ್ನು ರಕ್ಷಿಸಲು ಕನಿಷ್ಠ ಆಮದು ಬೆಲೆಯನ್ನು ಸರ್ಕಾರಕ್ಕೆ ಒತ್ತಾಯಿಸಿದ್ದರು.

ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ, ಭಾರತದಲ್ಲಿ ಈ ಹಣಕಾಸು ವರ್ಷದಲ್ಲಿ ಅಡಿಕೆ ಆಮದು ಹೆಚ್ಚಾಗಿದೆ ಮತ್ತು 2022-23 ರ ಆರ್ಥಿಕ ವರ್ಷದ ನವೆಂಬರ್ ಅಂತ್ಯದವರೆಗೆ ಒಟ್ಟು 61,450 ಟನ್ ಅಡಿಕೆ ಆಮದು ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಕಳೆದ ವಾರ ಸಂಸತ್ತಿಗೆ ತಿಳಿಸಿದೆ.

ಕೆನಡಾ, ಇಂಡೋನೇಷ್ಯಾ, ಮಾಲ್ಡೀವ್ಸ್, ಮ್ಯಾನ್ಮಾರ್, ಸಿಂಗಾಪುರ, ಶ್ರೀಲಂಕಾ, ತಾಂಜಾನಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ವಿಯೆಟ್ನಾಂ ಮತ್ತು ನೇಪಾಳದಿಂದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ವಾಣಿಜ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಅವರು ಮಂಗಳೂರಿನ ಬಿಜೆಪಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರ ಪ್ರಶ್ನೆಗೆ ಉತ್ತರಿಸಿದರು. ಆದಾಗ್ಯೂ, ಕಳೆದ ನಾಲ್ಕು ವರ್ಷಗಳಿಂದ ಭೂತಾನ್‌ನಿಂದ ಯಾವುದೇ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿಲ್ಲ ಎಂದು ಸಚಿವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read