HomeLatest NewsBREAKING : ಪ್ರತಿಭಟನಾಕಾರರ ವಿರುದ್ಧ ಕೇಸ್ ದಾಖಲಿಸಲ್ಲ ಎಂದ ಕೇಂದ್ರ ; 26 ದಿನಗಳ ಉಪವಾಸ...

BREAKING : ಪ್ರತಿಭಟನಾಕಾರರ ವಿರುದ್ಧ ಕೇಸ್ ದಾಖಲಿಸಲ್ಲ ಎಂದ ಕೇಂದ್ರ ; 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್ |WATCH VIDEO

ನವದೆಹಲಿ: ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು 26 ದಿನಗಳ ಕಾಲ ನಡೆಸಿದ ಅಮರಣಾಂತ ಉಪವಾಸವನ್ನು ಶುಕ್ರವಾರ ಗುರುಗ್ರಾಮದ ಮೆದಾಂತಾ ಆಸ್ಪತ್ರೆಯಲ್ಲಿ ಅಂತ್ಯಗೊಳಿಸಿದರು. ಕೇಂದ್ರ ಸರ್ಕಾರದೊಂದಿಗೆ ಹಲವು ವಾರಗಳ ಮಾತುಕತೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಪವಾಸ ಅಂತ್ಯಗೊಳಿಸಿದ ತಕ್ಷಣ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ವಾಂಗ್ಚುಕ್, ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಲಾಗುವುದಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದೆ ಎಂದು ತಿಳಿಸಿದರು. ಜುಲೈ 20ರಂದು ನಡೆದ ‘ಚಲೋ ಸಂಸತ್’ ಪ್ರತಿಭಟನೆಯಲ್ಲಿ ಭಾಗವಹಿಸಿದವರ ಮೇಲೂ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ ಎಂದು ಹೇಳಿದರು.

ಇದೇ ವೇಳೆ, ಪರೀಕ್ಷಾ ವ್ಯವಸ್ಥೆಯಲ್ಲಿ ಉತ್ತರದಾಯಿತ್ವ ಹಾಗೂ NEET-UG ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಕುರಿತ ವಿಷಯಗಳನ್ನು ಸಂಸತ್ತಿನಲ್ಲಿ ಚರ್ಚೆಗೆ ತೆಗೆದುಕೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ವಾಂಗ್ಚುಕ್ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಜೊತೆಗೆ, ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಹಾಗೂ ಭವಿಷ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಅಗತ್ಯ ಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ಅವರು ಹೇಳಿದರು.

ಇತ್ತೀಚಿನ NEET ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ವಿಚಾರವನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸುತ್ತಿದೆ ಎಂಬ ಮಾಹಿತಿಯನ್ನೂ ಕೇಂದ್ರವು ನೀಡಿದೆ ಎಂದು ವಾಂಗ್ಚುಕ್ ಹೇಳಿದರು.

ಜುಲೈ 24ರ ಮಧ್ಯರಾತ್ರಿ ನಂತರ ಗುರುಗ್ರಾಮದ ಮೆದಾಂತಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹಾಗೂ ಲೇಹ್-ಲಡಾಖ್ ಅಪೆಕ್ಸ್ ಬಾಡಿಯ ಹಿರಿಯ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ವಾಂಗ್ಚುಕ್ ಅವರಿಗೆ ಜ್ಯೂಸ್ ಕುಡಿಸುವ ಮೂಲಕ 26 ದಿನಗಳ ಉಪವಾಸವನ್ನು ಅಂತ್ಯಗೊಳಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಕೂಡ ಉಪಸ್ಥಿತರಿದ್ದರು. ಉಪವಾಸ ಅಂತ್ಯಗೊಳಿಸಿದ ಬಳಿಕದ ಮೊದಲ ವಿಡಿಯೋ ಸಂದೇಶದಲ್ಲಿ ವಾಂಗ್ಚುಕ್, ಸರ್ಕಾರದ ಭರವಸೆಗಳನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ತಾವು ಒತ್ತಾಯಿಸಿದ್ದರಿಂದ ಕಳೆದ ಎರಡು ದಿನಗಳಿಂದ ತೀವ್ರ ಮಾತುಕತೆ ನಡೆದಿತ್ತು. ಅದರಿಂದಲೇ ತಮ್ಮ ಉಪವಾಸವೂ ಇನ್ನಷ್ಟು ದಿನ ಮುಂದುವರಿಯಿತು ಎಂದು ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular