HomeIndiaಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರದಿಂದ ಯೋಜನೆ ಜಾರಿ

ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರದಿಂದ ಯೋಜನೆ ಜಾರಿ

ನವದೆಹಲಿ: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.

ಚಂಡೀಗಢ ಮತ್ತು ಅಸ್ಸಾಂನಲ್ಲಿ ಈಗಾಗಲೇ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಲೋಕಸಭೆಗೆ ನೀಡಲಾದ ಲಿಖಿತ ಉತ್ತರದಲ್ಲಿ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದು, ಆಯುಷ್ಮಾನ್ ಭಾರತ್- ಪ್ರಧಾನಮಂತ್ರಿ ಜನಾರೋಗ್ಯ ಯೋಜನೆಯಡಿ ಸೇರ್ಪಡೆಯಾದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಿಸಬಹುದಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತ ಸಂಭವಿಸಿದ ದಿನದಿಂದ 7 ದಿನಗಳವರೆಗೆ ಗರಿಷ್ಠ 1.5 ಲಕ್ಷ ರೂಪಾಯಿವರೆಗಿನ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದಾಗಿದೆ. ಮೋಟಾರ್ ವಾಹನ ಕಾಯ್ದೆ ಸೆಕ್ಷನ್ 164 ಬಿ ಅಡಿಯಲ್ಲಿ ಸ್ಥಾಪಿಸಲಾದ ಮೋಟಾರ್ ವಾಹನ ಅಪಘಾತ ನಿಧಿಯ ಮೂಲಕ ಇಂತಹ ಪ್ರಕರಣಗಳಿಗೆ ನೆರವು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular