HomeBusinessಹೊಸ ವರ್ಷಕ್ಕೆ ವಿದ್ಯುತ್ ಗ್ರಾಹಕರಿಗೆ ವಿಶೇಷ ಕೊಡುಗೆ: ಬಿಲ್ ನಲ್ಲೇ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ...

ಹೊಸ ವರ್ಷಕ್ಕೆ ವಿದ್ಯುತ್ ಗ್ರಾಹಕರಿಗೆ ವಿಶೇಷ ಕೊಡುಗೆ: ಬಿಲ್ ನಲ್ಲೇ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಪಾವತಿಸುವ ವಿಧಾನ ಜಾರಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವಿದ್ಯುತ್ ಬಿಲ್ ಸ್ಕ್ಯಾನ್ ಮಾಡಿ ಹಣ ಪಾವತಿಸುವ ವಿಧಾನ ಜಾರಿಗೆ ತಂದಿದ್ದು, ಗ್ರಾಹಕರಿಗೆ ವಿಶೇಷ ಕೊಡುಗೆ ನೀಡಲು ಮುಂದಾಗಿದೆ.

ವಿದ್ಯುತ್ ಬಿಲ್ ನಲ್ಲಿ ಕ್ಯೂ ಆರ್ ಕೋಡ್ ವ್ಯವಸ್ಥೆ ಇರುವುದರಿಂದ ತಾವು ಇರುವ ಜಾಗದಲ್ಲಿಯೇ ಬಿಲ್ ಪಾವತಿಸುವ ಗ್ರಾಹಕ ಸ್ನೇಹಿ ಯೋಜನೆ ಇದಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯಾಪ್ತಿಯ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳ ಗ್ರಾಹಕರು ವಿದ್ಯುತ್ ಬಿಲ್ ಪಾವತಿಸಲು ಸುಧಾರಿತ ವಿಧಾನವಾದ ಕ್ಯೂಆರ್ ಕೋಡ್ ವಿಧಾನವನ್ನು ಅನುಸರಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ 1 ರಿಂದ ಗ್ರಾಮಾಂತರ ಪ್ರದೇಶದಲ್ಲಿ ಮತ್ತು ಜನವರಿ ಮೊದಲ ವಾರದಿಂದ ನಗರ ವ್ಯಾಪ್ತಿಯಲ್ಲಿ ಈ ಯೋಜನೆ ಅನ್ವಯ ಗ್ರಾಹಕರು ವಿದ್ಯುತ್ ಬಿಲ್ ಪಾವತಿಸಬಹುದಾಗಿದ್ದು, ಬೆಂಗಳೂರಿನ ಶಕ್ತಿ ಭವನದಲ್ಲಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡಲಿದ್ದಾರೆ.

ಇದರಿಂದ ಮಾನವ ಹಸ್ತಕ್ಷೇಪ ಕಡಿಮೆಯಾಗಲಿದ್ದು, ಇನ್ಸ್ಟಂಟ್ ರಶೀದಿ ಸಿಗುತ್ತದೆ. ಕ್ಯೂಆರ್ ಕೋಡ್ ಬಳಸಿಕೊಂಡು ತಾವು ಇರುವ ಜಾಗದಲ್ಲಿಯೇ ಕ್ಷಣಾರ್ಧದಲ್ಲಿ ಬಿಲ್ ಪಾವತಿಸಬಹುದು. ಆನ್ಲೈನ್ ಬಿಲ್ ಪಾವತಿ ವಿಧಾನಕ್ಕಿಂತ ಸುಧಾರಿತ ವಿಧಾನ ಇದಾಗಿದ್ದು, ಮಾನವ ಸಂಪನ್ಮೂಲ ತಗ್ಗಿಸಬಹುದು. ದಾಖಲೀಕರಣಕ್ಕೆ ಅನುಕೂಲವಾಗುತ್ತದೆ. ಗ್ರಾಹಕ ಸ್ನೇಹಿ ಯೋಜನೆ ಇದಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular