HomeLatest Newsಸಿಇಟಿ: ಇಂದು ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್ 3ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಸಿಇಟಿ: ಇಂದು ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್ 3ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

UGCET/ UGNEET-25ರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಹಾಗೂ ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿಸಿಇಟಿ ಕೋರ್ಸ್ ಗಳ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ಫಲಿತಾಂಶಕ್ಕೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಸೆ.11ರಂದು ಬೆಳಿಗ್ಗೆ 11ಗಂಟೆ ಒಳಗೆ ಇ-ಮೇಲ್ ([email protected]) ಮೂಲಕ ತಿಳಿಸಬಹುದು.

ಅಂತಿಮ ಫಲಿತಾಂಶ ಪ್ರಕಟಣೆ ನಂತರ ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿಸಿಇಟಿ ಕೋರ್ಸ್ ಗಳ ಅಭ್ಯರ್ಥಿಗಳು ಸೆ.13ರೊಳಗೆ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸಂಬಂಧಪಟ್ಟ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶದ ದಿನಾಂಕವನ್ನು MCC ಮುಂದೂಡಿರುವ ಕಾರಣ ರಾಜ್ಯದಲ್ಲಿ ಕೂಡ ಈ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳು ಮುಂದಿನ ಸೂಚನೆಗಾಗಿ ಕಾಯಬೇಕಾಗುತ್ತದೆ.

ಎಂಜಿನಿಯರಿಂಗ್ ಸೇರಿದಂತೆ ಯುಜಿಸಿಇಟಿ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಹಿಂದಿನ ಸುತ್ತಿನಲ್ಲಿ ಶುಲ್ಕ ಅಥವಾ ಕಾಷನ್ ಡೆಪಾಸಿಟ್ ಪಾವತಿಸಿದ್ದರೆ ಅದನ್ನು ಈ ಸುತ್ತಿನಲ್ಲಿ ಹಂಚಿಕೆಯಾದ ಸೀಟಿನ ಶುಲ್ಕಕ್ಕೆ ಹೊಂದಾಣಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular