HomeKarnatakaಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆಯಾದವರಿಗೆ ಪ್ರವೇಶಕ್ಕೆ ದಿನಾಂಕ ವಿಸ್ತರಣೆ

ಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆಯಾದವರಿಗೆ ಪ್ರವೇಶಕ್ಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಯುಜಿ ಸಿಇಟಿ ಮತ್ತು ಯುಜಿ ನೀಟ್ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಪ್ರವೇಶ ಪ್ರಕ್ರಿಯೆ ಮುಗಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ದಿನಾಂಕ ವಿಸ್ತರಿಸಿದೆ.

ಸಿಇಟಿ ಸೀಟು ಪಡೆದವರು ಆಯ್ಕೆ ದಾಖಲಿಸಲು ಸೆ. 26ರ ವರೆಗೆ, ಶುಲ್ಕ ಪಾವತಿ ಮತ್ತು ದಾಖಲೆ ಸಲ್ಲಿಕೆಗೆ ಸೆ. 27ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆಪ್ಟೆಂಬರ್ 28 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಆಯ್ಕೆ ದಾಖಲೆಗೆ ಅವಕಾಶ ಇಲ್ಲ. ಆದರೆ ಶುಲ್ಕ ಪಾವತಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಇದೇ ದಿನಾಂಕಗಳು ಅನ್ವಯವಾಗುತ್ತವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular