HomeKarnatakaಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜು. 21 ರಂದು ದಾಖಲೆ ಪರಿಶೀಲನೆ

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜು. 21 ರಂದು ದಾಖಲೆ ಪರಿಶೀಲನೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶ ಬಯಸಿ ನಿಗದಿತ ದಿನಗಳಂದು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ಮುಗಿಸದ ಅಭ್ಯರ್ಥಿಗಳು ಜುಲೈ 21 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಹಾಜರಾಗಬಹುದಾಗಿದೆ.

ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಜುಲೈ 21ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ದಾಖಲಾತಿಗಳ ಆಫ್ ಲೈನ್ ಪರಿಶೀಲನೆ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್ಕಿಟೆಕ್ಚರ್ ವಿಭಾಗದಲ್ಲಿ ರ್‍ಯಾಂಕ್ ಪಡೆದು ದಾಖಲಾತಿ ಪರಿಶೀಲನೆ ಪೂರ್ಣಗೊಳಿಸದಿರುವವರಿಗೂ ಇದು ಅನ್ವಯವಾಗಲಿದೆ. ದಾಖಲಾತಿಗಳ ಪರಿಶೀಲನೆಗೆ ಬರುವ ಅಭ್ಯರ್ಥಿಗಳು ಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕ್ಲೇಮ್ ಮಾಡಿರುವ ಎಲ್ಲಾ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular