ಶಿವಮೊಗ್ಗ: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗೃಹರಕ್ಷಕ ದಳ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಎರಡು ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಬೀದರ್ ನಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯನ್ನು ಜನಿವಾರ ತೆಗೆಯದ್ದಕ್ಕೆ ಪರೀಕ್ಷಾ ಕೇಂದ್ರದಿಂದ ಹೊರ ಕಳುಹಿಸಲಾಗಿತ್ತು. ಇದು ರಾಜ್ಯಾದ್ಯಂತ ಬ್ರಾಹ್ಮಣ ಸಮುದಾಯದ, ವಿಪ್ರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಪರೀಕ್ಷಾ ಕೇಂದ್ರದ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಇದೀಗ ಶಿವಮೊಗ್ಗ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಗೃಹರಕ್ಷಕ ದಳ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.ಶಿವಮೊಗ್ಗ ಗೃಹರಕ್ಷಕ ದಳ ಕಮಾಂಡೆಂಟ್ ರಿಂದ ಆದೇಶ ಹೊರಡಿಸಲಾಗಿದೆ.