ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ಕಟ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿದೆ.
ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ನೀಡಿರುವ ದೂರುನ ಹಿನ್ನೆಲೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಜನಿವಾರ ಕಟ್ ಮಾಡಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಬ್ರಾಹ್ಮಣ ಮಹಾಸಭಾ ದೂರು ನೀಡಿತ್ತು. ಸಿಇಟಿ ಪರೀಕ್ಷೆಗೆ ಜನಿವಾರ ತೆಗೆಸಬೇಕು ಎಂಬ ನಿಯಮವಿಲ್ಲ. ಆದಾರೂ ಪರೀಕ್ಷಾ ಕೇಂದ್ರದವರು ವಿದ್ಯಾರ್ಥಿಯ ಜನಿವಾರ ಕತ್ತರಿಸಿದ್ದಾರೆ. ಈ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.