HomeLatest NewsBIG NEWS: ಜನಿವಾರ ತೆಗೆಯದ್ದಕ್ಕೆ CET ಪರೀಕ್ಷೆಗೆ ಅವಕಾಶ ನೀಡದ ಆರೋಪ: ವಿದ್ಯಾರ್ಥಿಗೆ ಉಚಿತ ಸೀಟ್...

BIG NEWS: ಜನಿವಾರ ತೆಗೆಯದ್ದಕ್ಕೆ CET ಪರೀಕ್ಷೆಗೆ ಅವಕಾಶ ನೀಡದ ಆರೋಪ: ವಿದ್ಯಾರ್ಥಿಗೆ ಉಚಿತ ಸೀಟ್ ಕೊಡುವುದಾಗಿ ಸಚಿವರ ಭರವಸೆ

ಬೀದರ್: ಜನಿವಾರ ತೆಗೆಯದ್ದಕ್ಕೆ ಸಿಇಟಿ ಪರೀಕ್ಷೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ವಿದ್ಯಾರ್ಥಿ ಸಿಇಟಿ ಪರೀಕ್ಷೆಯಿಂದಲೇ ವಂಚಿತನಾಗಿದ್ದು, ವಿದ್ಯಾರ್ಥಿಗೆ ನ್ಯಾಯ ಕೊಡಿಸುವಂತೆ ಆಗ್ರಹಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ.

ಸಿಇಟಿ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿ ಸುಚಿವೃತ ಕಲಕರ್ಣಿ ಮನೆಗೆ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್ ಭೇಟಿ ನೀಡಿದ್ದಾರೆ. ಬೀದರ್ ನ ಓಲ್ಡ್ ಸಿಟಿಯಲ್ಲಿರುವ ಸುಚಿವೃತ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿರುವ ಸಚಿವರು ಉಚಿತ ಸೀಟ್ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೀಮಣ್ಣ ಖಂಡ್ರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಚಿವೃತ ಕುಲಕರ್ಣಿಗೆ ಉಚಿತ ಸೀಟು ಕೊಡಿಸುವುದಾಗಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿ, ಧೈರ್ಯ ತುಂಬಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular