HomeKarnatakaಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 12 ನೇ ತರಗತಿ/ಪಿಯುಸಿ ಅಂಕ ದಾಖಲಿಸಲು ಸೂಚನೆ

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 12 ನೇ ತರಗತಿ/ಪಿಯುಸಿ ಅಂಕ ದಾಖಲಿಸಲು ಸೂಚನೆ

ಬೆಂಗಳೂರು: ಸಿಇಟಿ ವಿದ್ಯಾರ್ಥಿಗಳಿಗೆ ಪಿಯುಸಿ ಅಂಕ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ.

ಪ್ರಸಕ್ತ ಸಾಲಿನ ಸಿಇಟಿ ಬರೆದ ವಿದ್ಯಾರ್ಥಿಗಳ ಪೈಕಿ 2023ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾದ ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಿಬಿಎಸ್‌ಸಿ, ಐಸಿಎಸ್‌ಸಿ ಸೇರಿ ಇನ್ನಿತರ ಮಂಡಳಿಗಳ ವಿದ್ಯಾರ್ಥಿಗಳು ತಮ್ಮ 12ನೇ ತರಗತಿ ಅಂಕಗಳನ್ನು ಆನ್ಲೈನ್ ಮೂಲಕ ದಾಖಲಿಸಲು ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಸಿಇಟಿ ಅಂಕಗಳು ಮತ್ತು ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ರ್ಯಾಂಕಿಂಗ್ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಪ್ರತಿ ವಿದ್ಯಾರ್ಥಿಗಳು ತಮ್ಮ 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಂಕಗಳನ್ನು ಆನ್ಲೈನ್ ಮೂಲಕ ದಾಖಲಿಸಬೇಕು. ಇವರಲ್ಲಿ 2023ರಲ್ಲಿ ಪಿಯುಸಿ ಪಾಸ್ ಆಗಿರುವ ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳ ಅಂಕಗಳನ್ನು ನೇರವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪಡೆದುಕೊಳ್ಳಲಾಗುವುದು. ಮೇ 31 ಅಂಕ ದಾಖಲಿಸಲು ಕೊನೆಯ ದಿನವಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular