HomeKarnatakaBREAKING: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದ್ವಿತೀಯ PUC ಪೂರಕ ಪರೀಕ್ಷೆ ಬರೆಯುವವರಿಗೂ CET ಬರೆಯಲು ಅವಕಾಶ

BREAKING: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದ್ವಿತೀಯ PUC ಪೂರಕ ಪರೀಕ್ಷೆ ಬರೆಯುವವರಿಗೂ CET ಬರೆಯಲು ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ.

ಮೇ 20, 21 ರಂದು ಸಿಇಟಿ -0ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಪಿಯುಸಿ ಪೂರಕ ಪರೀಕ್ಷೆ ತೆಗೆದುಕೊಳ್ಳುವವರು ಕೂಡ ಸಿಇಟಿ ಬರೆಯಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಿಇಟಿ ಬರೆಯಲು ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ.

ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವು ವಿದ್ಯಾರ್ಥಿಗಳು ಪೂರಕ ಪರೀಕ್ಷೆ ತೆಗೆದುಕೊಂಡಿದ್ದು, ಇಂತಹ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ. ಸಿಇಟಿಗೆ ಹಾಜರಾದರೆ ಮಾತ್ರ ಸೀಟು ಹಂಚಿಕೆ ವೇಳೆ ಪೂರಕ ಪರೀಕ್ಷೆಯ ಅಂಕಗಳನ್ನು ಪರಿಗಣಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular