ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಶುಲ್ಕ ಪಾವತಿಗೆ ಮತ್ತೆ ಅವಕಾಶ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮನವಿಯ ಮೇರೆಗೆ ಶುಲ್ಕ ಪಾವತಿ ಮತ್ತು ಸಿಇಟಿ ಪರೀಕ್ಷೆ ಆಯ್ಕೆ ಮಾಡಿಕೊಳ್ಳಲು ಕೆಲವು ಷರತ್ತುಗಳೊಂದಿಗೆ ಮತ್ತೊಮ್ಮೆ ಅನುಮತಿ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈಗಾಗಲೇ ಅರ್ಜಿ ಸಲ್ಲಿಸಿದ್ದರೂ ಇದುವರೆಗೂ ಶುಲ್ಕ ಪಾವತಿಸದಿರುವ ಅಭ್ಯರ್ಥಿಗಳು ಏಪ್ರಿಲ್ 10 ರ ಬೆಳಗ್ಗೆಯಿಂದ ಏಪ್ರಿಲ್ 12ರ ಸಂಜೆ 5 ಗಂಟೆಯೊಳಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿಗೆ 600 ರೂಪಾಯಿ ಮೊತ್ತದ ಡಿಡಿ ತೆಗೆಸಿಕೊಂಡು ಸಿಇಟಿ ಅರ್ಜಿ ನಮೂನೆ ಸಹಿತ ಪ್ರಾಧಿಕಾರದ ಕಚೇರಿಗೆ ಖುದ್ದಾಗಿ ಹಾಜರಾಗಬೇಕು.

ಅರ್ಜಿಯಲ್ಲಿ ಕೆಲವರು ಕೇವಲ ನೀಟ್ ಮಾಡಿಕೊಂಡಿದ್ದಾರೆ. ಅಂತಹ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಆಯ್ಕೆ ಮಾಡಿಕೊಳ್ಳಲು ಬಯಸುವವರು ಏಪ್ರಿಲ್ 12ರ ಸಂಜೆ 5 ಗಂಟೆಯೊಳಗೆ ಪ್ರಾಧಿಕಾರಕ್ಕೆ ಹಾಜರಾಗಿ ಅರ್ಜಿ ಸಲ್ಲಿಸಬೇಕು. ಹೀಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಖಾಲಿ ಇರುವ ಪರೀಕ್ಷಾ ಕೇಂದ್ರಗಳಲ್ಲಿ ಅವಕಾಶ ಕೊಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ರಮ್ಯಾ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read