ಬೀದರ್: ರಾಜ್ಯಾದ್ಯಂತ ಬ್ರಾಹ್ಮಣ ಸಮುದಾಯದಿಂದ ಆಕ್ರೋಶಕ್ಕೆ ಕಾರಣವಾಗಿದ್ದ ಜನಿವಾರ ಪ್ರಕರಣದ ಪ್ರಮುಖ ಸಂತ್ರಸ್ತ ಬೀದರ್ ವಿದ್ಯಾರ್ಥಿ ಸುಚಿವ್ರತ ಕುಲಕರ್ಣಿ ಸಮಸ್ಯೆ ಇತ್ಯರ್ಥವಾಗಿದೆ.
ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಷಯದ ಸರಾಸರಿ ಅಂಕಗಳನ್ನು ಆಧಾರವಾಗಿ ಪರಿಗಣಿಸಿ ಗಣಿತಕ್ಕೆ ಅಂಕ ನೀಡುವಂತೆ ಕೋರಿ ಸುಚಿವ್ರತ ಕುಲಕರ್ಣಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ ಗಳಿಗಾಗಿ ನಡೆಸಿದ ಸಿಇಟಿ ಪರೀಕ್ಷೆಯಲ್ಲಿ ಬೀದರ್ ನ ಸಾಯಿ ಸ್ಪೂರ್ತಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಪ್ರವೇಶಕ್ಕೆ ಜನಿವಾರ ತೆಗೆಯಲು ಸಿಬ್ಬಂದಿ ಸೂಚಿಸಿದ್ದರು. ಇದಕ್ಕೆ ಒಪ್ಪದ ಸುಚಿವ್ರತ ಪರೀಕ್ಷೆಗೆ ಹಾಜರಾಗದೆ ವಾಪಸ್ ಆಗಿದ್ದರು. ರಾಜ್ಯಾದ್ಯಂತ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗಿತ್ತು.
ಸಿಇಟಿ ಮರು ಪರೀಕ್ಷೆ ಬರೆಯುವುದು ಅಥವಾ ರಸಾಯನ ಶಾಸ್ತ್ರ, ಭೌತಶಾಸ್ತ್ರ ವಿಷಯದ ಸರಾಸರಿ ಅಂಕಗಳ ಆಧಾರವಾಗಿ ಪರಿಗಣಿಸಿ ಗಣಿತಕ್ಕೆ ಅಂಕ ನೀಡುವ ಎರಡು ಪ್ರಸ್ತಾಪಗಳನ್ನು ರಾಜ್ಯ ಸರ್ಕಾರ ವಿದ್ಯಾರ್ಥಿಯ ಮುಂದೆ ಇಟ್ಟಿತ್ತು.
ಸುಚಿವ್ರತ ಸರ್ಕಾರದ ಸರಾಸರಿ ಅಂಕ ನೀಡುವ ಪ್ರಸ್ತಾವನೆಗೆ ಒಪ್ಪಿಕೊಂಡಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದಿದ್ದಾರೆ.