ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿಗೆ 3.49 ಲಕ್ಷ ಅರ್ಜಿ ಸಲ್ಲಿಕೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿಗೆ ಇದುವರೆಗೆ 3.49 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಈ ಬಾರಿ 4 ಲಕ್ಷ  ಅರ್ಜಿ ಸಲ್ಲಿಸಿದ್ದಾರೆ.

ಫೆಬ್ರವರಿ 25ರವರೆಗೆ ಸಿಇಟಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ. ಏಪ್ರಿಲ್ 16 ಮತ್ತು 17ರಂದು ಸಿಇಟಿ ಪರೀಕ್ಷೆ ನಿಗದಿಯಾಗಿದೆ. ಅಂದು ಗುಡ್ ಫ್ರೈಡೇ ಇರುವುದರಿಂದ ಪರೀಕ್ಷೆ ದಿನಾಂಕ ಮುಂದೂಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲು ಕೇರಳದ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಸಿಇಟಿ ಅರ್ಜಿ ಸಲ್ಲಿಕೆ, ಪರೀಕ್ಷೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ, ನೀಟ್ ಪರೀಕ್ಷೆ ಮೇ 4 ರಂದು ನಿಗದಿಯಾಗಿದೆ. ಸಿಇಟಿ ದಿನಾಂಕವನ್ನು ವಿದ್ಯಾರ್ಥಿಗಳ ಹಿತಾಸಕ್ತಿಗೆ ಅನುಗುಣವಾಗಿ ನಿಗದಿ ಮಾಡಲಾಗಿದ್ದು, ಸಿಇಟಿ ಪರೀಕ್ಷಾ ದಿನಾಂಕ ಬದಲಾವಣೆಯ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read