ರಾಜ್ಯದ 700 ಕೇಂದ್ರಗಳಲ್ಲಿ ನಾಳೆಯಿಂದ ಎರಡು ದಿನ ಸಿಇಟಿ ಪರೀಕ್ಷೆ

ಬೆಂಗಳೂರು: ರಾಜ್ಯದ 700ಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಸಿಇಟಿ ಪರೀಕ್ಷೆ ನಡೆಯಲಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸುವ 2024ರ ಸಾಮಾನ್ಯ ಪ್ರವೇಶ ಪರೀಕ್ಷೆ(CET) ಏಪ್ರಿಲ್ 18, 19ರಂದು ನಡೆಯಲಿದೆ.

3,27,384 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಈ ವರ್ಷ ಅತಿ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ. ಬೆಳಗ್ಗೆ 10.30 ಕ್ಕೆ ಪರೀಕ್ಷೆ ಆರಂಭವಾಗಲಿದ್ದು, ವಿರಾಮ ಸಮಯ ಸೇರಿ 3.50 ರವರೆಗೆ ಪರೀಕ್ಷೆ ನಡೆಯುತ್ತದೆ. ಏಪ್ರಿಲ್ 18ರಂದು ಜೀವಶಾಸ್ತ್ರ, ಗಣಿತಶಾಸ್ತ್ರ, ಏಪ್ರಿಲ್ 19 ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯದ ಪರೀಕ್ಷೆ ನಡೆಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read