HomeKarnatakaಸಿಇಟಿ: 12ನೇ ತರಗತಿ ಅಂಕ ಪರಿಶೀಲಿಸಿ ದೃಢೀಕರಿಸಲು, ಅಂಕಪಟ್ಟಿ ಅಪ್ಲೋಡ್ ಮಾಡಲು ಲಿಂಕ್ ಬಿಡುಗಡೆ

ಸಿಇಟಿ: 12ನೇ ತರಗತಿ ಅಂಕ ಪರಿಶೀಲಿಸಿ ದೃಢೀಕರಿಸಲು, ಅಂಕಪಟ್ಟಿ ಅಪ್ಲೋಡ್ ಮಾಡಲು ಲಿಂಕ್ ಬಿಡುಗಡೆ

CBSE, CISCE ಮತ್ತು ಇತರೆ ರಾಜ್ಯ ಪರೀಕ್ಷಾ ಮಂಡಳಿಗಳಿಂದ 12ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ಪರಿಶೀಲಿಸಿ ದೃಢೀಕರಿಸಲು ಹಾಗೂ ಅಂಕ ಪಟ್ಟಿ ಅಪ್ ಲೋಡ್ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ.

ನಿಗದಿತ ಲಿಂಕ್ ಮೂಲಕ ಲಾಗಿನ್ ಆದ ತಕ್ಷಣ ಅಭ್ಯರ್ಥಿಗಳಿಗೆ ತಮ್ಮ ಅಂಕಗಳು ಪ್ರದರ್ಶನವಾಗುತ್ತದೆ. ಅವು ಸರಿ ಇದ್ದರೆ ದೃಢೀಕರಿಸಬೇಕು. ಒಂದು ವೇಳೆ ಇದುವರೆಗೂ ಅಂಕಗಳನ್ನು ನಮೂದಿಸದೇ ಇದ್ದರೆ ಅಂತಹವರು ಕೂಡ ಅಂಕಗಳನ್ನು ದಾಖಲಿಸಬಹುದು. ನಂತರ ಅದಕ್ಕೆ ಪೂರಕವಾದ ಅಂಕಪಟ್ಟಿಯನ್ನು ಅಪ್ ಲೋಡ್ ಮಾಡಬೇಕು. ಇದಕ್ಕೆ ಮೇ‌ 24ರವರೆಗೆ ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಧೃಡೀಕರಿಸಿ ಸಲ್ಲಿಸುವ ಅಂಕಗಳನ್ನೇ ನಿಯಮಾನುಸಾರ ಮೆರಿಟ್ ನಿರ್ಧರಿಸಲು ಉಪಯೋಗಿಸಲಾಗುವುದು ಹಾಗೂ ಸೀಟು ಹಂಚಿಕೆಯ ನಂತರ ಆಯಾ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಸಂದರ್ಭದಲ್ಲಿ ಅಂಕಗಳನ್ನು ಪರಿಶೀಲಿಸಲಾಗುವುದು. ಅಭ್ಯರ್ಥಿಗಳು ತಪ್ಪು ಮಾಹಿತಿ ನೀಡಿದಲ್ಲಿ ಸೀಟು ರದ್ದುಗೊಳ್ಳುತ್ತದೆ ಮತ್ತು ಅಭ್ಯರ್ಥಿತನವನ್ನು ತೆಗೆದು ಹಾಕಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2026 ಹಾಗೂ ಅದಕ್ಕಿಂತ ಮೊದಲಿನ ವರ್ಷಗಳಲ್ಲಿ ಉತ್ತೀರ್ಣರಾದವರು ಕೂಡ ಅಂಕಗಳನ್ನು ದಾಖಲಿಸಬಹುದು.

ರಾಜ್ಯ ಪಠ್ಯಕ್ರಮದಲ್ಲಿ ಓದಿದ ಅಭ್ಯರ್ಥಿಗಳ ಅಂಕಗಳ ವಿವರವನ್ನು ಆನ್ ಲೈನ್ ಮೂಲಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಲಭ್ಯವಾಗಲಿದೆ. ಹೀಗಾಗಿ ರಾಜ್ಯ ಮಂಡಳಿಯ ಅಭ್ಯರ್ಥಿಗಳು ಅಂಕ ದಾಖಲಿಸುವ ಅಗತ್ಯ ಇಲ್ಲ.

ಒಟ್ಟಾರೆ ಈ ಬಗ್ಗೆ KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು KEA vikasana ಯೂಟ್ಯೂಬ್ ಚಾನೆಲ್ ನಲ್ಲಿ ಮಾತನಾಡಿದ್ದಾರೆ. ಅದರ ಲಿಂಕ್ ಈ ಕೆಳಗಿದೆ ನೋಡಿ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular