ಸಿಇಟಿ ಸೀಟು ಹಂಚಿಕೆಯಾದರೂ ಕಾಲೇಜುಗಳಿಗೆ ಪ್ರವೇಶ ಪಡೆಯದ 2348 ವಿದ್ಯಾರ್ಥಿಗಳಿಗೆ ಶೋಕಾಸ್ ನೋಟಿಸ್

ಬೆಂಗಳೂರು: ಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನಲ್ಲಿ ಸೀಟು ಹಂಚಿಕೆಯಾದರೂ ಸಂಬಂಧಿಸಿದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳದ ಒಟ್ಟು 2348 ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಿದೆ.

ವಿವಿಧ ಕಾಲೇಜುಗಳಲ್ಲಿ ಸೀಟು ಹಂಚಿಕೆಯಾದ ನಂತರ ಈ ಅಭ್ಯರ್ಥಿಗಳು ಪ್ರವೇಶ ಪಡೆದುಕೊಳ್ಳದ ಹಿನ್ನೆಲೆಯಲ್ಲಿ ಅವರ ನಂತರದ ಮೆರಿಟ್ ವಿದ್ಯಾರ್ಥಿಗಳಿಗೆ ಈ ಸೀಟುಗಳು ಸಿಗದೇ ಅನ್ಯಾಯ ಮಾಡಿದಂತಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಅಭ್ಯರ್ಥಿಗಳ ನೋಂದಾಯಿತ ಇ-ಮೇಲ್ ಗೆ ನೋಟಿಸ್ ಕಳುಹಿಸಲಾಗಿದೆ. ಮೂರು ದಿನಗಳಲ್ಲಿ ಅವರು ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಸೀಟು ಹಂಚಿಕೆ ನಂತರ ಶುಲ್ಕ ಪಾವತಿಸದವರು, ಶುಲ್ಕ ಪಾವತಿಸಿಯೂ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳದವರು, ಅಪೂರ್ಣ ಶುಲ್ಕ ಪಾವತಿಸಿದವರು ಹೀಗೆ ಒಟ್ಟು ಮೂರು ವಿಭಾಗಗಳನ್ನು ಮಾಡಿಕೊಂಡು ಅಭ್ಯರ್ಥಿಗಳಿಗೆ ಕೆಇಎ ವತಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read