UGCET & KREIS -2026 ಈ ಎರಡೂ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು, ಆನ್ ಲೈನ್ ಅರ್ಜಿಯಲ್ಲಿ ಪ್ರವರ್ಗ ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿರುವ ಆರ್.ಡಿ ಸಂಖ್ಯೆಯನ್ನು ನಮೂದಿಸಲು ಸೂಚಿಸಲಾಗಿದೆ.
ಕೆಲ ಅಭ್ಯರ್ಥಿಗಳು ಈಗಾಗಲೇ ಇರುವ ಹಳೇ ಜಾತಿ ಪ್ರಮಾಣ ಪತ್ರದ ಆರ್ ಡಿ ಸಂಖ್ಯೆಯನ್ನು ನಮೂದಿಸುತ್ತಿದ್ದು, ಇದನ್ನು ಸೀಟು ಹಂಚಿಕೆಗೆ ಪರಿಗಣಿಸಲಾಗುವುದಿಲ್ಲ. ಒಳ ಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಜಾತಿ ಪ್ರಮಾಣ ಪತ್ರವನ್ನು ಹೊಸದಾಗಿ ಪಡೆದು, ಅದರ ಆರ್ ಡಿ ಸಂಖ್ಯೆಯನ್ನು ಅರ್ಜಿಯಲ್ಲಿ ನಮೂದಿಸಬೇಕು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

