HomeKarnataka‘CET’ ಅರ್ಹತೆ ಪಡೆದ ವಿದ್ಯಾರ್ಥಿಗಳೇ ಗಮನಿಸಿ : ದಾಖಲೆಗಳ ಪರಿಶೀಲನೆಗೆ ವೇಳಾಪಟ್ಟಿ ಪ್ರಕಟ

‘CET’ ಅರ್ಹತೆ ಪಡೆದ ವಿದ್ಯಾರ್ಥಿಗಳೇ ಗಮನಿಸಿ : ದಾಖಲೆಗಳ ಪರಿಶೀಲನೆಗೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA)  ಯುಜಿ ಸಿಇಟಿ-2023ರ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ರ್ಯಾಂಕ್ ಪಡೆದ ಅಭ್ಯರ್ಥಿಗಳಿಗೆ, ಆನ್ಲೈನ್ ಮೂಲಕ ದಾಖಲಾತಿ ಪರಿಶೀಲನೆಗೆ ದಿನಾಂಕವನ್ನು ಪ್ರಕಟಿಸಿದೆ.

ಅರ್ಹತಾ ಕಂಡಿಕೆ ‘ಎ’ ಷರತ್ತುಗಳನ್ನು ಪೂರೈಸುವ ಎಲ್ಲಾ ಅಭ್ಯರ್ಥಿಗಳು ಸೀಟು ಹಂಚಿಕೆಗೆ ಅರ್ಹತೆ ಪಡೆಯುವುದಕ್ಕಾಗಿ, ಅಭ್ಯರ್ಥಿಗಳು ವ್ಯಾಸಂಗ ಮಾಡಿದ ಶಾಲೆಯ ವ್ಯಾಪ್ತಿಯಲ್ಲಿರುವ / ಕಾಲೇಜುಗಳಿಗೆ ನಿಗದಿಯಾಗಿರುವ ಸಂಬಂಧಿಸಿದ ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿಗೆ ಇಂಜಿನಿಯರಿಂಗ್ ರ್ಯಾಂಕ್ ಆಧಾರದ ಮೇಲೆ ನಿಗದಿಪಡಿಸಿದ ದಿನಾಂಕಗಳಂದು ದಾಖಲಾತಿ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಿದೆ.

ವಿವಿಧ ವ್ಯಾಸಂಗ ಪ್ರಮಾಣ ಪತ್ರ ಪರಿಶೀಲನೆ, ಆನ್ಲೈನ್ ದಾಖಲಾತಿ ಪರಿಶೀಲನೆಯ ಬಗ್ಗೆ ಪ್ರಾಧಿಕಾರದ ವೆಬ್ಸೈಟಿನಲ್ಲಿ ಪೋಸ್ಟ್ ಮಾಡಿರುವ ಸೂಚನೆಗಳನ್ನು ಮತ್ತು ಮಾರ್ಗದರ್ಶನಗಳನ್ನು ಅಭ್ಯರ್ಥಿಗಳು ಮತ್ತು ಪೋಷಕರು ಓದಿಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ದಿನಾಂಕ 27-06-2023 ರಿಂದ 15-07-2023 ರವರೆಗೆ ಆನ್ಲೈನ್ ಮೂಲಕ ದಾಖಲಾತಿ ಪರಿಶೀಲನೆ ಮಾಡಲು ಕೆಇಎ ದಿನಾಂಕವನ್ನು ನಿಗದಿಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular