ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಶನಿವಾರ ಪ್ರಕಟಿಸಿದೆ.
ಇದೇ ಮೊದಲ ಬಾರಿಗೆ ಪ್ರತ್ಯೇಕ ಪ್ರವೇಶ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಚಾಯ್ಸ್ ಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶನಿವಾರದಿಂದ ಶುರುವಾಗಿದೆ.
ಚಾಯ್ಸ್ 1 ಆಯ್ಕೆ ಮಾಡಿದ ಅಭ್ಯರ್ಥಿಗಳು ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಲು ಆಗಸ್ಟ್ 2ರಿಂದ 8ರವರೆಗೆ ಅವಕಾಶ ನೀಡಲಾಗಿದೆ. ಕಾಲೇಜಿಗೆ ಹೋಗಿ ಮಾಡಿಕೊಳ್ಳಲು ಆಗಸ್ಟ್ 9 ಕೊನೆಯ ದಿನವಾಗಿದೆ.
ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿ ಫಾರ್ಮಾ, ಫಾರ್ಮಾ ಡಿ ಕೋರ್ಸ್ ಪ್ರವೇಶಕ್ಕೆ ಚಾಯ್ಸ್ ಗಳನ್ನು ಆಯ್ಕೆ ಮಾಡಲು ಆಗಸ್ಟ್ 4ರಿಂದ ಅವಕಾಶ ನೀಡಲಾಗಿದೆ. ಚಾಯ್ಸ್ 1 ಆಯ್ಕೆ ಮಾಡಿದವರು ಆಗಸ್ಟ್ 4 ರಿಂದ 8 ರವರೆಗೆ ಶುಲ್ಕ ಪಾವತಿಸಿ ಆಗಸ್ಟ್ 9ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ತಿಳಿಸಿದ್ದಾರೆ.
#UGCET/UGNEET-25: First round real seat allotment results has been announced.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 2, 2025
ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು #KEA ಶನಿವಾರ ಪ್ರಕಟಿಸಿದ್ದು, ಕಾಲೇಜು ಪ್ರವೇಶ ಪ್ರಕ್ರಿಯೆಯನ್ನೂ ಆರಂಭಿಸಿದೆ.
ಇದೇ ಮೊದಲ ಬಾರಿಗೆ ಒಂದೊಂದು ಕೋರ್ಸ್ಗೂ ಪ್ರತೇಕವಾದ…