HomeLatest Newsಸಿಇಟಿ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್ ಕೋರ್ಸ್ ಆಯ್ಕೆ, ಕಾಲೇಜು ಪ್ರವೇಶ ಆರಂಭ

ಸಿಇಟಿ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್ ಕೋರ್ಸ್ ಆಯ್ಕೆ, ಕಾಲೇಜು ಪ್ರವೇಶ ಆರಂಭ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಶನಿವಾರ ಪ್ರಕಟಿಸಿದೆ.

ಇದೇ ಮೊದಲ ಬಾರಿಗೆ ಪ್ರತ್ಯೇಕ ಪ್ರವೇಶ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಚಾಯ್ಸ್ ಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶನಿವಾರದಿಂದ ಶುರುವಾಗಿದೆ.

ಚಾಯ್ಸ್ 1 ಆಯ್ಕೆ ಮಾಡಿದ ಅಭ್ಯರ್ಥಿಗಳು ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಲು ಆಗಸ್ಟ್ 2ರಿಂದ 8ರವರೆಗೆ ಅವಕಾಶ ನೀಡಲಾಗಿದೆ. ಕಾಲೇಜಿಗೆ ಹೋಗಿ ಮಾಡಿಕೊಳ್ಳಲು ಆಗಸ್ಟ್ 9 ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿ ಫಾರ್ಮಾ, ಫಾರ್ಮಾ ಡಿ ಕೋರ್ಸ್ ಪ್ರವೇಶಕ್ಕೆ ಚಾಯ್ಸ್ ಗಳನ್ನು ಆಯ್ಕೆ ಮಾಡಲು ಆಗಸ್ಟ್ 4ರಿಂದ ಅವಕಾಶ ನೀಡಲಾಗಿದೆ. ಚಾಯ್ಸ್ 1 ಆಯ್ಕೆ ಮಾಡಿದವರು ಆಗಸ್ಟ್ 4 ರಿಂದ 8 ರವರೆಗೆ ಶುಲ್ಕ ಪಾವತಿಸಿ ಆಗಸ್ಟ್ 9ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular