HomeKarnatakaಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮುಂದುವರೆದ ಸುತ್ತಿನ ವೇಳಾಪಟ್ಟಿ ಪ್ರಕಟ

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮುಂದುವರೆದ ಸುತ್ತಿನ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ 2023ರ ಎರಡನೇ ಮುಂದುವರೆದ ಸುತ್ತಿನ ವೇಳಾಪಟ್ಟಿ ಪ್ರಕಟಿಸಿದೆ.

ಸೆಪ್ಟೆಂಬರ್ 22ರ ಬೆಳಗ್ಗೆ 10 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ಆಯ್ಕೆಗಳನ್ನು ಸಲ್ಲಿಸಬಹುದಾಗಿದೆ. ಮೊದಲನೇ ಮತ್ತು ಎರಡನೇ ಸುತ್ತಿನಲ್ಲಿ ಸೀಟು ಪಡೆದುಕೊಂಡ ಅಭ್ಯರ್ಥಿಗಳು ತಮ್ಮ ಸೀಟುಗಳನ್ನು ರದ್ದು ಮಾಡಿಕೊಳ್ಳಲು ಸೆಪ್ಟಂಬರ್ 21ರ ಬೆಳಗ್ಗೆ 11 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಅಂತಹ ಅಭ್ಯರ್ಥಿಗಳಿಂದ 5000 ರೂ. ಕಡಿತ ಮಾಡಿ ಬಾಕಿ ಉಳಿದ ಮೊತ್ತವನ್ನು ಹಿಂತಿರುಗಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟಂಬರ್ 23ರಂದು ರಾತ್ರಿ 8 ಗಂಟೆಗೆ ಎರಡನೇ ಮುಂದುವರೆದ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಶುಲ್ಕ ಪಾವತಿ ಮತ್ತು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೆಪ್ಟೆಂಬರ್ 25 ರಿಂದ 27ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular