HomeKarnatakaಸಿಇಟಿ ಮೂರನೇ ಸುತ್ತಿನ ಸೀಟು ಹಂಚಿಕೆ ಆಪ್ಷನ್ಸ್ ದಾಖಲಿಸಲು ಲಿಂಕ್ ಬಿಡುಗಡೆ

ಸಿಇಟಿ ಮೂರನೇ ಸುತ್ತಿನ ಸೀಟು ಹಂಚಿಕೆ ಆಪ್ಷನ್ಸ್ ದಾಖಲಿಸಲು ಲಿಂಕ್ ಬಿಡುಗಡೆ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಲಿಂಕ್ ಬಿಡುಗಡೆ ಮಾಡಿದೆ.

ಎರಡನೇ ಸುತ್ತಿನಲ್ಲಿ ಯಾವುದೇ ಸೀಟು ಹಂಚಿಕೆಯಾಗದವರು/ ಹಂಚಿಕೆ ನಂತರ ದಂಡ ಪಾವತಿಸಿ ಸೀಟು ರದ್ದು ಮಾಡಿಕೊಂಡವರು ಹೊಸದಾಗಿ ಆಪ್ಷನ್ಸ್ ದಾಖಲಿಸಲು ಸೆ.3ರ ಸಂಜೆ 6 ಗಂಟೆವರೆಗೆ ಅವಕಾಶ ನೀಡಲಾಗಿದೆ.

ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಕಾಲೇಜಿನಲ್ಲಿ ಪ್ರವೇಶ ಪಡೆದಿರುವ ಹಾಗೂ ಅಪ್ ಗ್ರೆಡೇಷನ್ ಗೆ ಹೋಗಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸೆ.2ರಂದು ಬೆಳಿಗ್ಗೆ 11ರಿಂದ ಸೆ.3ರ ಸಂಜೆ‌ 6 ಗಂಟೆವರೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ‌ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರನೇ ಸುತ್ತಿನಲ್ಲಿ ಭಾಗವಹಿಸುವವರು ಹೊಸದಾಗಿಯೇ ಆಪ್ಷನ್ಸ್ ದಾಖಲಿಸಬೇಕು. ಈ ಹಿಂದಿನ ಆಪ್ಷನ್ಸ್ ಗಣನೆಗೆ ತೆಗೆದುಕೊಳ್ಳುವುದಿಲ್ಲ.

3ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದರೆ ಕಾಲೇಜಿನಲ್ಲಿ ಪ್ರವೇಶ ಪಡೆಯುವುದು ಕಡ್ಡಾಯ. ಇಲ್ಲದಿದ್ದರೆ ಶುಲ್ಕದ ಐದು ಪಟ್ಟು ದಂಡ ಪಾವತಿಸಬೇಕಾಗುತ್ತದೆ. ಹೀಗಾಗಿ ಇಷ್ಟ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನೇ ಆಪ್ಷನ್ಸ್ ದಾಖಲಿಸುವಾಗ ಪರಿಗಣಿಸಲು ಕೋರಲಾಗಿದೆ.

ಎರಡನೇ ಸುತ್ತಿನ ಸೀಟು ಹಂಚಿಕೆ ನಂತರ ಯಾವುದೇ ಚಾಯ್ಸ್ ಆಯ್ಕೆ ಮಾಡದ ಅಭ್ಯರ್ಥಿಗಳು ಈ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗುವುದಿಲ್ಲ.

ಹಾಗೆಯೇ ಎರಡನೇ ಸುತ್ತಿನಲ್ಲಿ ಚಾಯ್ಸ್-4 ಹಾಕಿರುವ ಅಭ್ಯರ್ಥಿಗಳು ಕೂಡ ಭಾಗವಹಿಸಲು ಆಗುವುದಿಲ್ಲ. ಆದರೆ ಅಂತಹವರು ವೈದ್ಯಕೀಯ ಕೋರ್ಸ್ ಗಳ ಆಪ್ಷನ್ಸ್ ಇದ್ದರೆ ಮಾತ್ರ ಎರಡನೇ ಸುತ್ತಿನ ವೈದ್ಯಕೀಯ ಕೌನ್ಸೆಲಿಂಗ್ ನಲ್ಲಿ ಭಾಗವಹಿಸಬಹುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಎರಡನೇ ಸುತ್ತಿನ ನಂತರ ಉಳಿದಿರುವ ಸೀಟುಗಳ ವಿವರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅವುಗಳನ್ನು ನೋಡಲು ಕೋರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular