HomeKarnatakaಇಂದಿನಿಂದ ಸಿಇಟಿ ಆರಂಭ: ಪರೀಕ್ಷೆ ಮುಗಿದ ಕೂಡಲೇ ಒಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್...

ಇಂದಿನಿಂದ ಸಿಇಟಿ ಆರಂಭ: ಪರೀಕ್ಷೆ ಮುಗಿದ ಕೂಡಲೇ ಒಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್ ಲೋಡ್

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ಗುರುವಾರ ನಡೆಯಲಿವೆ. ಶುಕ್ರವಾರ ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏ.23 ಮತ್ತು 24ರಂದು ರಾಜ್ಯದ 745  ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದಕ್ಕೆ ಕೆಇಎ ಸಕಲ ಸಿದ್ಧತೆ ಕೂಡ ಮಾಡಿಕೊಂಡಿದೆ.

ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ ಕೂಡ ಜಾರಿ ಮಾಡಲಾಗಿದೆ. ಹಾಗೆಯೇ ಮೊಬೈಲ್, ಎಲೆಕ್ಟ್ರಾನಿಕ್ ವಸ್ತು, ಶ್ರವಣ ಸಾಧನ ಇತ್ಯಾದಿ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ತೆಗೆದುಕೊಂಡು ಹೋಗಲು ನಿಷೇಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾನ್ಯ ಪ್ರವೇಶ ಪರೀಕ್ಷೆ ಮುಗಿದ ನಂತರ ಒಎಂಆರ್ ಶೀಟ್ ಗಳನ್ನು ಪರೀಕ್ಷಾ ಕೇಂದ್ರವಾರು ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಮತ್ತು ಧಾರವಾಡ ಪರೀಕ್ಷಾ ಕೇಂದ್ರಗಳ ಒಎಂಆರ್ ಶೀಟ್ ಗಳನ್ನು ಆಯಾ ದಿನವೇ ಅಪ್ ಲೋಡ್ ಮಾಡಲಾಗುತ್ತದೆ. ಉಳಿದ ಜಿಲ್ಲೆಗಳ ಒಎಂಆರ್ ಶೀಟ್ ಗಳನ್ನು ಬೆಂಗಳೂರಿಗೆ ಬಂದ ತಕ್ಷಣವೇ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲಾಗುತ್ತದೆ.

ಪರೀಕ್ಷಾ ವ್ಯವಸ್ಥೆಯಲ್ಲಿನ ಪಾರದರ್ಶಕತೆಯ ಭಾಗವಾಗಿ ಈ ಕ್ರಮ ಕೈಗೊಂಡಿದ್ದು, ಯಾರು ಬೇಕಾದರು ಒಎಂಆರ್ ಶೀಟ್ ಗಳನ್ನು ನೋಡಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular