ಬೆಂಗಳೂರು: ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಇಂದಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತಿದೆ.
ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗು ಬೊಟ್ಟಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಗಮ್ ಟೇಪ್ ಅಂಟಿಸಿರುವ ಘಟನೆ ಬೆಳಕಿಗೆ ಬಂದಿದೆ.
ಪರೀಕ್ಷೆಗೆ ಬರುವ ಅಭ್ಯರ್ಥಿಗಳು ಯಾವುದೇ ಆಭರಣ, ಮೆಟಲ್ ವಸ್ತುಗಳನ್ನು ಧರಿಸಲು ಅವಕಶವಿಲ್ಲ ಎಂದು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆದರೆ ಪರೀಕ್ಷಾ ಕೇಂದ್ರಕ್ಕೆ ಬಂದಾಗ ಕೆಲ ವಿದ್ಯಾರ್ಥಿನಿಯರಿಗೆ ಮೂಗು ಬೊಟ್ಟು ಇದ್ದುದರಿಂದ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು, ಮೂಗು ಬೊಟ್ಟಿಗೆ ಗಮ್ ಟೇಪ್ ಅಂಟಿಸಿದ್ದಾರೆ.
ಮೂಗುತ್ತಿ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಆರಂಭದಲ್ಲಿ ಅವುಗಳನ್ನು ತೆಗೆದುಹಾಕುವಂತೆ ಸೂಚನೆ ನೀಡಲಾಗಿತ್ತು. ಆಭರಣ ತೆಗೆಯಲು ಸೂಚಿಸಿದರೂ ಸಾಧ್ಯವಾಗದ ವಿದ್ಯಾರ್ಥಿನಿಯರಿಗೆ ಸಿಬ್ಬಂದಿ ತಾತ್ಕಾಲಿಕ ಪರಿಹಾರವಾಗಿ ಗಮ್ ಟೇಪ್ ಅಂಟಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಆಭರಣಗಳನ್ನು ಧರಿಸುವುದನ್ನು ನಿಷೇಧಿಸುವ ಕಟ್ಟುನಿಟ್ಟಿನ ಭದ್ರತಾ ನಿಯಮಗಳ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

