HomeKarnatakaಮೈಸೂರು CFTRIನಲ್ಲಿ 28 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಜಿ ಸೈನಿಕರಿಗೆ ಮೀಸಲಾತಿ

ಮೈಸೂರು CFTRIನಲ್ಲಿ 28 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಜಿ ಸೈನಿಕರಿಗೆ ಮೀಸಲಾತಿ

ದಾವಣಗೆರೆ: ಸಿ.ಎಸ್.ಐ.ಆರ್ – ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (CFTRI), ಮೈಸೂರು ಸಂಸ್ಥೆಯು  28 ತಾಂತ್ರಿಕ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಒಟ್ಟು 28 ಹುದ್ದೆಗಳ ಪೈಕಿ ಫಿಟ್ಟರ್ (Fitter) ಮತ್ತು ಎಲೆಕ್ಟ್ರಾನಿಕ್ಸ್ ಮೆಕಾನಿಕ್ ವಿದ್ಯಾರ್ಹತೆ ಆಧಾರದ ಮೇಲೆ 02 ಹುದ್ದೆಗಳನ್ನು ಮಾಜಿ ಸೈನಿಕರಿಗೆ ಮೀಸಲಿರಿಸಲಾಗಿದೆ. 

ಅರ್ಹ ಹಾಗೂ ಆಸಕ್ತ ಮಾಜಿ ಸೈನಿಕರು ನವೆಂಬರ್ 18 ರೊಳಗೆ ಜಾಲತಾಣ: https://cftri.res.in ಅಥವಾ https://recruitment.cftri.res.in ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಇದೆ. ವೆಬ್‌ ಸೈಟ್ ಸಂಪರ್ಕಿಸಬಹುದು ಎಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ವಿವಿಧ ಇಲಾಖೆ/ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಪ್ರವೇಶ ಪರೀಕ್ಷೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಅಕ್ಟೋಬರ್ 26 ರಂದು ಬೆಳಿಗ್ಗೆ 10.30 ರಿಂದ 12.30 ಪತ್ರಿಕೆ -1 ಮತ್ತು ಮಧ್ಯಾಹ್ನ 2.30 ರಿಂದ 4.30 ರವರೆಗೆ ಹಾಗೂ ಅಕ್ಟೋಬರ್‌ 27 ರಂದು ಅಪರಾಹ್ನ 3 ರಿಂದ 5  ಗಂಟೆಯವರಿಗೆ ನಡೆಯುವ ವಿವಿಧ ಇಲಾಖೆ/ಸಂಸ್ಥೆಗಳಲ್ಲಿನ  ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕ, ಸೂಕ್ಷ್ಮ ಹಾಗೂ ಬಿಗಿ ಭದ್ರತೆಯೊಂದಿಗೆ ನಡೆಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು  ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ/ಸಂಸ್ಥೆಗಳಲ್ಲಿನ  ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳನ್ನು ನಡೆಸುವ ಸಂಬಂಧ ಏರ್ಪಡಿಸಿದ್ದ ಪೂರ್ವಭಾವಿ  ಸಭೆಯ ಅ‍ಧ್ಯಕ್ಷತೆ ವಹಿಸಿ ಮಾತನಾಡಿದರು.

ಅಕ್ಟೋಬರ್ 26 ರಂದು ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ರಾಜ್ಯ ವಿಮಾ ಯೋಜನೆ, ವೈದ್ಯಕೀಯ ಸೇವೆಗಳ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಭೂಮಾಪನ ಮತ್ತು ಕಂದಾಯ ವ್ಯವಸ್ಥೆ ಭೂ ದಾಖಲೆಗಳ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ವಿವಿಧ  ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯು  ನಗರದ 05 ಕೇಂದ್ರಗಳಲ್ಲಿ ನಡೆಯಲಿದೆ 3221ಅಭ್ಯರ್ಥಿಗಳು  ಎರಡು ಪರೀಕ್ಷೆಯನ್ನು 2 ಅಧಿವೇಶನದಲ್ಲಿ ಬರೆಯುವರು ಹಾಗೂ ಅಕ್ಟೋಬರ್ 27 ರಂದು ನಡೆಯುವ ನೇರ ನೇಮಕಾತಿ ಪರೀಕ್ಷೆಯು 04 ದಾವಣಗೆರೆ ಕೇಂದ್ರಗಳಲ್ಲಿ 2231 ಅಭ್ಯರ್ಥಿಗಳು  ಪರೀಕ್ಷೆಯನ್ನು ಬರೆಯುವರು  ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕಟ್ಟುನಿಟ್ಟಿನ ತಪಾಸಣೆ (Frisking) ನಡೆಸಬೇಕು. ಎಲೆಕ್ಟ್ರಾನಿಕ್ ಸಾಧನಗಳ ಬಳಕೆಗೆ ಸಂಪೂರ್ಣ ತಡೆ ಒಡ್ಡಬೇಕು. ಅಭ್ಯರ್ಥಿಗಳನ್ನು ತಪಾಸಣೆ ಮಾಡುವಾಗ ಧಾರ್ಮಿಕ ಸಂಕೇತಗಳ ವಿಷಯದಲ್ಲಿ ಸೂಕ್ಷ್ಮವಾಗಿ ನಡೆದುಕೊಳ್ಳಬೇಕು. ಯಾರ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಗೌರವಯುತವಾಗಿ ತಪಾಸಣೆ ನಡೆಸಬೇಕು ಎಂದರು.

ಪರೀಕ್ಷೆಯ ಹಿಂದಿನ ದಿನವೇ ಪರೀಕ್ಷಾ ಕೊಠಡಿಗಳು, ಸಿಸಿಟಿವಿ ಕ್ಯಾಮೆರಾಗಳು ಹಾಗೂ ಗೋಡೆ ಗಡಿಯಾರಗಳನ್ನು ಪರಿಶೀಲಿಸಬೇಕು. ಕೊಠಡಿಗಳನ್ನು ಸರಿಯಾಗಿ ಸೀಲ್ ಮಾಡಿ, ಕೀಲಿ ಕೈಗಳನ್ನು ಜವಾಬ್ದಾರಿಯುತ ಅಧಿಕಾರಿಗಳ ವಶದಲ್ಲೇ ಇಟ್ಟುಕೊಳ್ಳಬೇಕು ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಪರೀಕ್ಷಾರ್ಥಿಗಳ ತಪಾಸಣೆ ವೇಳೆಯಲ್ಲಿ ವಿನಾಕಾರಣ ವಿಳಂಬ ಮಾಡದೆ, ಸಮಯಪ್ರಜ್ಞೆ ಹಾಗೂ ಸೌಜನ್ಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಅಕ್ಟೋಬರ್‌ 26 ರಂದು ಪರೀಕ್ಷೆ ನಡೆಯುವ ಕೇಂದ್ರಗಳು

ನರ್ಸಿಂಗ್‌ ಆಫೀಸರ್‌, ಫಾರ್ಮಸಿ ಆಫೀಸರ್‌, ಕೆಇಎ-ಎಸ್.ಡಿ.ಎ, ಸಮಾಜ ಕಲ್ಯಾಣ ಇಲಾಖೆಯ ಶಿಕ್ಷಕರ ಹುದ್ದೆಗಳು :

1.ಎ.ವಿ. ಕಮಲಮ್ಮ ಪಿಯು ಕಾಲೇಜು, ಪಿ.ಜೆ.ಬಡಾವಣೆ -600 ಅಭ್ಯರ್ಥಿಗಳು, 2. ಮೋತಿವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಿಜೆ.ಬಡಾವಣೆ -682 3. ರಾಜನಹಳ್ಳಿ ಸೀತಮ್ಮ ಸರ್ಕಾರಿ ಬಾಲಕಿಯರ ಕಾಲೇಜು, ಪಿ.ಜೆ.ಬಡಾವಣೆ-682, 4. ಸರ್ಕಾರಿ ಬಾಲಕರ ಪಿಯು ಕಾಲೇಜು , ಪಿ.ಜೆ.ಬಡಾವಣೆ-681 ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಡೆಂಟಲ್‌ ಕಾಲೇಜು ರಸ್ತೆ, ಎಂಸಿಸಿ ಬ್ಲಾಕ್-576

ಅಕ್ಟೋಬರ್‌ 27 ರಂದು ಪರೀಕ್ಷೆ ನಡೆಯುವ ಕೇಂದ್ರಗಳು (5-ದಾವಣಗೆರೆ ) :

ಕನ್ನಡ ಭಾಷೆ, ಆಂಗ್ಲ ಮತ್ತು ಕಂಪ್ಯೂಟರ್‌ ಸಾಕ್ಷರತಾ (ಪತ್ರಿಕೆ -2) ಪರೀಕ್ಷೆ

1.ಎ.ವಿ. ಕಮಲಮ್ಮ ಪಿಯು ಕಾಲೇಜು, ಪಿ.ಜೆ.ಬಡಾವಣೆ -587 ಅಭ್ಯರ್ಥಿಗಳು, 2. ಮೋತಿವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಿಜೆ.ಬಡಾವಣೆ -717 3. ರಾಜನಹಳ್ಳಿ ಸೀತಮ್ಮ ಸರ್ಕಾರಿ ಬಾಲಕಿಯರ ಕಾಲೇಜು, ಪಿ.ಜೆ.ಬಡಾವಣೆ-713 ಮತ್ತು 4. ಸರ್ಕಾರಿ ಬಾಲಕರ ಪಿಯು ಕಾಲೇಜು , ಪಿ.ಜೆ.ಬಡಾವಣೆ-204

ಡಿಡಿಪಿಯು ಪಳನಿಸ್ವಾಮಿ ಹಾಗೂ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಸಿಬ್ಬಂದಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular