ಮೇಘಾಲಯ ರಾಜ್ಯಪಾಲರಾಗಿ ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ನೇಮಕ

ನವದೆಹಲಿ: ಮಹಾರಾಷ್ಟ್ರ, ಮೇಘಾಲಯ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರಪತಿ ದ್ರೌಪದರಿ ಮುರ್ಮು ಅವರು 10 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಮಾಜಿ ಸಂಸದ ಮಾಜಿ ಸಚಿವ ಸಿ.ಹೆಚ್. ವಿಜಯ್ ಶಂಕರ್ ಅವರನ್ನು ಮೇಘಾಲಯಕ್ಕೆ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

ರಾಣೆಬೆನ್ನೂರು ಮೂಲದವರಾದ ವಿಜಯ್ ಶಂಕರ್ 1994 ರಿಂದ 98 ರವರೆಗೆ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1998, 2004ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದರು. 2010 ರಿಂದ 16 ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದರು. 2010ರಲ್ಲಿ ಕರ್ನಾಟಕ ಕ್ಯಾಬಿನೆಟ್ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಅವರಿಗೆ ರಾಜ್ಯಪಾಲರ ಹುದ್ದೆ ಒಲಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read