HomeKarnatakaBREAKING: ನ್ಯಾಯಾಲಯದ ಸಿಬ್ಬಂದಿಗಳ ಕಾರು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

BREAKING: ನ್ಯಾಯಾಲಯದ ಸಿಬ್ಬಂದಿಗಳ ಕಾರು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಚಾಮರಾಜನಗರ: ನ್ಯಾಯಾಲಯದ ಸಿಬ್ಬಂದಿಗಳು ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿರುವ ಮುಡಿಗುಂಡ ಸೇತುವೆ ಬಳಿ ತಡರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕೊಳ್ಳೇಗಾಲ‌ ನ್ಯಾಯಾಲಯದ ಶಿರಸ್ತೆದಾರ ನಂಜುಂಡಪ್ಪ ಹಾಗೂ ಸಿಬ್ಬಂದಿ ಯಮುನಪ್ಪ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಕೃಷ್ಣಪ್ಪ, ಲೋಕೇಶ್ ಹಾಗೂ ಶಂಕರಪ್ಪ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ‌. ಗಯಾಳುಗಳನ್ನು ಆಸ್ಪತ್ತೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ, ವಾಹನವನ್ನು ವಶಕ್ಕೆ ಪಡೆದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular