ಚಾಮರಾಜನಗರ: ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಈದ್ಗಾ ಮೈದಾನದ ಬಂಜಾರ ಶಾಲೆ ಬಳಿ ಈ ಘಟನೆ ನಡೆದಿದೆ. ನಿಲ್ಲಿಸಿದ್ದ ಕಾರಿನಲ್ಲಿ ಚಾಲಕನ ಸೀಟಿನಲ್ಲಿ ವ್ಯಕ್ತಿಯೋರ್ವರು ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಮಿಳುನಾಡು ರಿಜಿಸ್ಟ್ರೇಷನ್ ಹೊಂದಿರುವ ಕಾರು ಇದಾಗಿದೆ.
ಕಳೆದ ಎರಡು ದಿನಗಳಿಂದ ಕಾರು ನಿಂತಲ್ಲೇ ನಿಂತಿತ್ತು. ಅನುಮಾನಗೊಂಡ ಸಾರ್ವಜನಿಕರು ಕಾರಿನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕಾರಿನ ಒಳಗೆ ಪರಿಶೀಲಿಸಿದಾಗ ಚಾಲಕನ ಸೀಟ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ.
ಚಾಮರಾಜನಗರ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದು, ಪೊಲೀಸರು ತನಿಖೆ ನಡೆಸಿದ್ದಾರೆ.
