BREAKING: ವಂಚನೆ ಕೇಸ್: ಸಿಸಿಬಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ & ಗ್ಯಾಂಗ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹಣ ಪಡೆದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಸಿಸಿಬಿ ಪೊಲೀಸರ ವಿಚರಣೆ ವೇಳೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಹಣ ಪಡೆದುಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿವೆ. ಆದರೆ 5 ಕೋಟಿಯಲ್ಲ 3 ಕೋಟಿ ಹಣ ಪಡೆದಿರುವುದಾಗಿ ಬಾಯ್ಬಿಟ್ಟಿದ್ದಾರೆ.

ಪ್ರಕರಣದ 7ನೇ ಆರೋಪಿಯಾಗಿರುವ ಶ್ರೀಕಾಂತ್, ಉದ್ಯಮಿ ಗೋವಿಂದ ಪೂಜಾರಿ ಬಳಿಯಿಂದ ಹಣ ಪಡೆದಿದ್ದು, ಸಿಸಿಬಿ ವಿಚಾರಣೆ ವೇಳೆ ಉದ್ಯಮಿಯಿಂದ ಹಣ ಪಡೆದಿದ್ದು ನಾನೇ. ಆದರೆ 5ಕೋಟಿಯಲ್ಲ 3 ಕೋಟಿ ಹಣ ಪಡೆದಿದ್ದಾಗಿ ಹೇಳಿರುವುದಾಗಿ ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read