HomeKarnatakaBIG NEWS: ಗೋವಿಂದ ಬಾಬು ವಿರುದ್ಧ ಇಡಿಗೆ ಪತ್ರ ಬರೆದ ಚೈತ್ರಾ ಕುಂದಾಪುರ

BIG NEWS: ಗೋವಿಂದ ಬಾಬು ವಿರುದ್ಧ ಇಡಿಗೆ ಪತ್ರ ಬರೆದ ಚೈತ್ರಾ ಕುಂದಾಪುರ

ಬೆಂಗಳೂರು: ಉದ್ಯಮಿ ಗೋವಿಂದ ಬಾಬುಗೆ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ, ಇದೀಗ ಗೋವಿಂದ ಬಾಬು ವಿರುದ್ಧವೇ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪತ್ರ ಬರೆದಿದ್ದಾಳೆ.

ಉದ್ಯಮಿ ಗೋವಿಂದ ಬಾಬು ಅವರಿಂದಲೆ ಹಣ ಪಡೆದು ವಂಚಿಸಿರುವ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಇದೀಗ ಗೋವಿಂದ ಬಾಬು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಇಡಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಹಣದ ವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

5 ಕೋಟಿ ಹಣದ ಬಗ್ಗೆ ಗೋವಿಂದ ಬಾಬು ಆಪ್ತನೇ ನನಗೆ ಮಾಹಿತಿ ನೀಡಿದ್ದಾನೆ. ಹಣ ನೀಡಿದ ಬಗ್ಗೆ ನನ್ನ ಜೊತೆಯೂ ಗೋವಿಂದ ಬಾಬು ಚರ್ಚಿಸಿದ್ದಾರೆ. ಚುನಾವಣಾ ಟಿಕೆಟ್ ಗಾಗಿ ಹಣ ವರ್ಗಾಯಿಸಿದ್ದಾರೆ. ಮಂಜುನಾಥ್ ಗೆ 1 ಕೋಟಿ, ಅಭಿನವ ಹಾಲಶ್ರೀ ಸ್ವಾಮೀಜಿಗೆ 1.5 ಕೋಟಿ. ವಿಶ್ವನಾಥ್ ಜಿಗೆ 3 ಕೋಟಿ ನೀಡಿದ್ದಾಗಿ ನನ್ನ ಬಳಿ ಗೋವಿಂದ ಬಾಬು ಹೇಳಿದ್ದಾರೆ . ಈ ಬಗ್ಗೆ ಪೊಲೀಸರಿಗೆ ದೂರು ನೀಡುವಂತೆ ನಾನು ಗೋವಿಂದ ಬಾಬುಗೆ ಹೇಳಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಒಟ್ಟಾರೆ ಗೋವಿಂದ ಬಾಬು ವಿರುದ್ಧ ಚೈತ್ರಾ ಕುಂದಾಪುರ ಇಡಿಗೆ ಪತ್ರ ಬರೆದು ದೂರು ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ

For Latest News Updates, Join Our Whatsapp Community🚩
RELATED ARTICLES

Most Popular