BIG NEWS: ಚೈತ್ರಾ & ಟೀಂ ವಂಚನೆ ಪ್ರಕರಣ; ಸಿಸಿಬಿಯಿಂದ ಚಾರ್ಜ್ ಶೀಟ್ ಸಲ್ಲಿಸಲು ನಿರ್ಧಾರ

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಚೈತ್ರಾ & ಟಿಂ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಮುಂದಾಗಿದ್ದಾರೆ.

ಚೈತ್ರಾ & ಟೀಂ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖೆ ಪೂರ್ಣಗೊಳಿಸಿದ್ದು, ಪ್ರಕರಣ ಸಂಬಂಧ 68 ಸಾಕ್ಷ್ಯಗಳನ್ನು ಕಲೆ ಹಾಕಿದೆ. ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸಿದೆ.

ಮುಂದಿನವಾರ ಸಿಸಿಬಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದೆ. ಇನ್ನು ಚೈತ್ರಾ ಹಾಗೂ ಟೀಂ ನ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ಹಣವನ್ನು ರಿಕವರಿ ಮಾಡಿದ್ದಾರೆ. ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 7 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜಶೀಟ್ ತಯಾರಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read