HomeKarnatakaBIG NEWS: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು

BIG NEWS: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು

ಮಂಗಳೂರು: ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪ್ರಚೋದನಕಾರಿ ಭಾಷಣದಿಂದ ಕೋಮುದ್ವೇಷಕ್ಕೆ ಕಾರಣವಾಗುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಹಿಂದೂ ಯುವಕರು ಅನ್ಯಧರ್ಮದವರನ್ನು ಪ್ರೀತಿಸಿ ವಿವಾಹವಾಗಿ ಎಂದು ಕರೆ ನೀಡಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಪ್ರಚೋದನಕಾರಿ ಹೇಳಿಕೆ ಮೂಲಕ ಕೋಮುದ್ವೇಷ ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಸೂಲಿಬೆಲೆ ವಿರುದ್ಧ ದೂರು ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular