BIG NEWS: ಶಾಲಾ ಪಠ್ಯಪುಸ್ತಕದಲ್ಲಿರುವ ‘ಚಕ್ರವರ್ತಿ ಸೂಲಿಬೆಲೆ’ ಅಧ್ಯಾಯ ಕಡಿತ; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು (State Congress government) ಶಾಲಾ ಪಠ್ಯಪುಸ್ತಕ ಪರಿಷ್ಕರಣೆ(Revision of school textbooks)ಗೆ ಮುಂದಾಗಿದ್ದು, ಚಕ್ರವರ್ತಿ ಸೂಲಿಬೆಲೆ (Chakravarti Sulibele) ಬರೆದಿರುವ ಅಧ್ಯಾಯವನ್ನು ತೆಗೆಯುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದಿರುವವರೆಲ್ಲಾ ಪಠ್ಯ ರಚನೆ ಮಾಡಲು ಪ್ರಾರಂಭಿಸಿದ್ದಾರೆ. ಅಂತಹ ಪಾಠ ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು ಕನ್ನಡ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಎಂದು ಕಿಡಿಕಾರಿದ್ದಾರೆ.

ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ? ಬಾಡಿಗೆ ಭಾಷಣಕಾರರನ್ನೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿದ್ದೀರಿ. ಅದನ್ನು ನಮ್ಮ ಮಕ್ಕಳು ಓದಬೇಕಾ? ಎಂದು ಪ್ರಶ್ನಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read