HomeKarnatakaBIG NEWS: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮತ್ತೊಂದು ದೂರು ದಾಖಲು

BIG NEWS: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮತ್ತೊಂದು ದೂರು ದಾಖಲು

ಕಲಬುರ್ಗಿ: ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಕಲಬುರ್ಗಿ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.

ಕಲಬುರ್ಗಿ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್ ಎಂಬುವವರು ದೂರು ದಾಖಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ರಾಯಚೂರಿನ ಶಿರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ, ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಕ್ರವರ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಲಬುರ್ಗಿ ಪೊಲೀಸ್ ಆಯುಕ್ತ ಆರ್.ಅಚೇತನ್ ಗೆ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular