HomeKarnatakaಕಾಂಗ್ರೆಸ್ ನಲ್ಲಿ ದಲಿತರನ್ನು ತುಳಿದ ಸಿದ್ಧರಾಮಯ್ಯ: ಹುಲಿ –ಕುನ್ನಿ ಕತೆ ಹೇಳಿ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ನಲ್ಲಿ ದಲಿತರನ್ನು ತುಳಿದ ಸಿದ್ಧರಾಮಯ್ಯ: ಹುಲಿ –ಕುನ್ನಿ ಕತೆ ಹೇಳಿ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದ ಮೇಲೆ ದಲಿತರನ್ನು ತುಳಿದಿದ್ದಾರೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದನ್ನು ಸ್ವತಃ ಕಾಂಗ್ರೆಸ್ ನಾಯಕಿ ಮೊಟ್ಟಮ್ಮನವರೇ ಹೇಳಿದ್ದಾರೆ. ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದ ಮೇಲೆ ಕಡೆಗಣಿಸಲ್ಪಟ್ಟೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೋದಿಗೆ ನನ್ನನ್ನು ಕಂಡ್ರೆ ಭಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬೆಟ್ಟದ ಮೇಲೆ ಹುಲಿಯೊಂದು ಹೋಗುತ್ತಿತ್ತು. ಕುನ್ನಿ ಕೆಳಗೆ ಕೂತಿತ್ತು. ಬೆಟ್ಟದ ಮೇಲೆ ಹೋಗುತ್ತಿರುವ ಹುಲಿ ಈ ಕುನ್ನಿ ಕಡೆ ನೋಡಲಿಲ್ಲ. ಹಾಗಾಗಿ, ಕುನ್ನಿ ನನ್ನ ನೋಡಿ ಹುಲಿ ಹೆದರಿಕೊಂಡಿತು ಎಂದು ಹೇಳಿತು. ರಾಜ್ಯದಲ್ಲಿ ಸಿದ್ದರಾಮಯ್ಯ ನೋಡಿ ಒಂದು ಮಗು ಕೂಡ ಹೆದರುವುದಿಲ್ಲ. ಇನ್ನೂ ಪ್ರಧಾನಿ ನರೇಂದ್ರ ಮೋದಿಯವರು ಭಯ ಬೀಳುತ್ತಾರಾ ಎಂದು ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular