ಆಗಸ್ಟ್ 30ಕ್ಕೆ ಮರು ಬಿಡುಗಡೆಯಾಗುತ್ತಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕರಿಯ’

ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಖ್ಯಾತಿ ಪಡೆದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ  ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ  ಜೈಲು ಪಾಲಾಗಿದ್ದು, ಅವರ ಅಭಿಮಾನಿಗಳಿಗೆ ಬೇಸರ ತಂದಿದೆ. ಇದರ ಬೆನ್ನಲ್ಲೇ ಆಗಸ್ಟ್ 30ರಂದು  ದರ್ಶನ್ ನಟನೆಯ ಸೂಪರ್ ಡೂಪರ್ ಹಿಟ್ ಚಿತ್ರ ಕರಿಯ ರೀ ರಿಲೀಸ್ ಆಗುತ್ತಿದ್ದು, ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

2003 ಜನವರಿ ಮೂರರಂದು ತೆರೆಕಂಡಿದ್ದ ಪ್ರೇಮ್ ನಿರ್ದೇಶನದ ಈ ಚಿತ್ರ ಸುಮಾರು 700ಕ್ಕು ಹೆಚ್ಚು ದಿನಗಳ ಕಾಲ ಪ್ರದರ್ಶನಗೊಳ್ಳುವ ಮೂಲಕ ಸ್ಯಾಂಡಲ್ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು.  ರೌಡಿಸಂ ಹಾಗೂ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ದರ್ಶನ್ ಗೆ ಜೋಡಿಯಾಗಿ ಅಭಿನಯಶ್ರೀ ಅಭಿನಯಿಸಿದ್ದು, ಮೈಕೋ ನಾಗರಾಜ್, ಉಮೇಶ್ ಪುಂಗ, ನಂದಕಿಶೋರ್, ದಶಾವರ ಚಂದ್ರು, ನಂದೀಶ್,  ಬೀ ಜಯಶ್ರೀ, ಫೈವ್ ಸ್ಟಾರ್ ಗಣೇಶ್ ಹಾಗೂ ಸುರೇಶ್ ಶರ್ಮಾ ಬಣ್ಣ ಹಚ್ಚಿದ್ದಾರೆ. ಗುರುಕಿರಣ್ ಸಂಗೀತ ಸಂಯೋಜನೆ ನೀಡಿದ್ದು, ಸಂತೋಷ್ ಎಂಟರ್ಪ್ರೈಸಸ್ ಬ್ಯಾನರ್ ನಲ್ಲಿ ಆನೇಕಲ್ ಬಾಲರಾಜು ನಿರ್ಮಾಣ ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read