ಇಂದು ರೀ ರಿಲೀಸ್ ಆಗಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ನವಗ್ರಹ’

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೆಲವರು ಕೊಲೆ ಆರೋಪಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಅವಮಾನಿಸುತ್ತಿದ್ದರೆ ದರ್ಶನ್ ಅಭಿಮಾನಿಗಳು ಮಾತ್ರ ತಮ್ಮ ನೆಚ್ಚಿನ ನಟನನ್ನು ಬಿಟ್ಟು ಕೊಡದೆ ಆರಾಧಿಸುತ್ತಿದ್ದಾರೆ.

2008 ನವೆಂಬರ್ 7ರಂದು ತೆರೆಕಂಡಿದ್ದ ದಿನಕರ್ ತೂಗುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ಬ್ಲ್ಯಾಕ್ ಬಸ್ಟರ್ ಚಿತ್ರ ‘ನವಗ್ರಹ’ ಇಂದು  ಮರು ಬಿಡುಗಡೆಯಾಗಿದೆ. ದರ್ಶನ್ ಅಭಿಮಾನಿಗಳ ಒತ್ತಾಯದ ಮೇರೆಗೆ  ರಿಲೀಸ್ ಮಾಡಲಾಗಿದ್ದು, ಥಿಯೇಟರ್ ಮುಂದೆ ಸಂಭ್ರಮಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಖಳನಾಯಕರ ಪುತ್ರರಾದ ವಿನೋದ್ ಪ್ರಭಾಕರ್, ಸೃಜನ್ ಲೋಕೇಶ್, ಗಿರಿ ದಿನೇಶ್, ಧರ್ಮ ಕೀರ್ತಿರಾಜ್, ತರುಣ್ ಸುಧೀರ್, ನಾಗೇಂದ್ರ  ಅರಸ್ ಅಭಿನಯಿಸಿದ್ದು, ವರ್ಷ ಹಾಗೂ ಶರ್ಮಿಳಾ ಮಾಂಡ್ರೆ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

ಇನ್ನುಳಿದಂತೆ ಸೌರವ್, ಕುರಿ ಪ್ರತಾಪ್, ಮಳವಳ್ಳಿ ಸಾಯಿಕೃಷ್ಣ, ವಿನೋದ್ ವರದರಾಜ್, ವಿಕ್ರಮ್ ಉದಯಕುಮಾರ್ ಉಳಿದ ಪಾತ್ರವರ್ಗದಲ್ಲಿದ್ದಾರೆ. ತೂಗುದೀಪ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ಮೀನಾ ತೂಗುದೀಪ ಶ್ರೀನಿವಾಸ್ ನಿರ್ಮಾಣ ಮಾಡಿದ್ದು ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ.

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read